ಸಿನಿಮಾದಲ್ಲಿ ನೋಡಿದ ಹಾಗೇ ರಿಯಲ್ ಲೈಫ್‌ನಲ್ಲಿ ಮಾಡಿದ್ರೆ ಇದೇ ಆಗೋದು.. ಕಳ್ಳರು ಚಾಪೆ ಕೆಳಗೆ ನುಗ್ಗಿದ್ರೆ ಪೊಲೀಸರು ರಂಗೋಲಿ ಕೆಳಗೆ ನುಗ್ಗುತ್ತಾರೆ ಅನ್ನೋದಕ್ಕೆ ಇದೇ ಪ್ರತ್ಯಕ್ಷ ಸಾಕ್ಷಿ. ಇಲ್ಲೊಬ್ಬ ಖತರ್ನಾಕ್ ಖೈದಿ 2011ರ ಫೆಬ್ರವರಿ 1ರಂದು ಕೇರಳದಲ್ಲಿ ಸಂಚಲನ ಸೃಷ್ಟಿಸಿದ್ದ ಯುವತಿ ರೇ*ಪ್ ಅಂಡ್ ಮ*ರ್ಡರ್ ಕೇಸ್‌ನಲ್ಲಿ ಗೋವಿಂದಚಾಮಿ ಅರೆಸ್ಟ್ ಆಗಿದ್ದ.
ಎರ್ನಾಕುಲಂನಿಂದ ಶೋರ್ನೂರಿಗೆ ಹೋಗುತ್ತಿದ್ದ ಪ್ಯಾಸೆಂಜರ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 23 ವರ್ಷದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಹತ್ಯೆ ಮಾಡಿದ್ದ. ಈ ಪ್ರಕರಣದಲ್ಲಿ ಆರೋಪಿ ಗೋವಿಂದಚಾಮಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. ಕೇರಳದ ಕಣ್ಣೂರಿನ ಸೆಂಟ್ರಲ್ ಜೈಲಿನಿಂದ ನಿನ್ನೆ ಮಧ್ಯರಾತ್ರಿ 1 ಗಂಟೆ 20ಕ್ಕೆ ಗೋವಿಂದ ಚಾಮಿ ಎಸ್ಕೇಪ್ ಆಗಿದ್ದ.
ಕಣ್ಣೂರು ಕೇಂದ್ರ ಕಾರಾಗೃಹದಿಂದ 4 ಕಿ.ಮೀ ದೂರದಲ್ಲಿರುವ ಪಾಳುಬಿದ್ದ ಮನೆಯ ಬಳಿಯ ಬಾವಿಯಲ್ಲಿ ಅಡಗಿ ಕುಳಿತಿದ್ದ. ಜೈಲಿನಿಂದ ಎಸ್ಕೇಪ್ ವಿಚಾರ ತಿಳಿದ ಪೊಲೀಸರು ಡಾಗ್ ಸ್ಕ್ವಾಡ್, ಸುತ್ತ ಮುತ್ತಲಿನ ಸಿಸಿಟಿವಿ ದೃಶ್ಯ ಆಧರಿಸಿ ಕಾರ್ಯಾಚರಣೆ ನಡೆಸಿದ್ದರು. ಇದಾದ ಬಳಿಕ ಬೆಳಗ್ಗೆ 10:30ರ ಸುಮಾರಿಗೆ ಬಾವಿಯಲ್ಲಿ ಅಡಗಿ ಕೂತಿದ್ದ ಗೋವಿಂದ ಚಾಮಿಯನ್ನು ಪತ್ತೆ ಹಚ್ಚಿದ ಪೊಲೀಸರು ಮತ್ತೆ ಲಾಕ್ ಮಾಡಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…