ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರು ಅತ್ಯಂತ ಸಮರ್ಥವಾಗಿ 4,078 ದಿನಗಳ ಆಡಳಿತ ನಡೆಸಿದ್ದಾರೆ. ಅಂದರೆ, ಜವಾಹರಲಾಲ್ ನೆಹರೂ ಅವರ ನಂತರದಲ್ಲಿ ಅತಿ ಹೆಚ್ಚು ದಿನಗಳ ಕಾಲ ದೇಶವನ್ನು ಮುನ್ನಡೆಸುತ್ತಿರುವ ಎರಡನೇ ಪ್ರಧಾನಿ ಆಗಿ ಹೊರಹೊಮ್ಮಿದ್ದಾರೆ.
ಇದು ಹೊಸ ದಾಖಲೆ. ಇದಕ್ಕಾಗಿ ನಾಡಿನ, ದೇಶದ ಜನರ ಪರವಾಗಿ ಅಭಿನಂದನೆಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿಜೀ ಅವರು ಸತತ 3ನೇ ಬಾರಿಗೆ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸುತ್ತಿದ್ದಾರೆ. ದೇಶದ ಪ್ರಧಾನಮಂತ್ರಿಯಲ್ಲ.
ದೇಶ ಸೇವಕ ಎಂಬ ವಿಚಾರ ಇಟ್ಟುಕೊಂಡು ದೇಶವನ್ನು ಮುನ್ನಡೆಸುತ್ತಿದ್ದಾರೆ. ಮೋದಿಜೀ ಅವರು ತುರ್ತು ಪರಿಸ್ಥಿತಿ ಹೇರಿದವರಲ್ಲ. ಯಾವುದೇ ಒಂದು ಅನುಕಂಪದ ಆಧಾರದಲ್ಲಿ ಸತತವಾಗಿ ಈ ದೇಶದ ಆಡಳಿತ ನಡೆಸುತ್ತಿಲ್ಲ ಎಂದು ತಿಳಿಸಿದ್ದಾರೆ. ಅವರು ಪ್ರಾಮಾಣಿಕರಾಗಿ, ಪರಿಶ್ರಮದಿಂದ ಅಭಿವೃದ್ಧಿ ಮಾಡುವ ಮೂಲಕ 3ನೇ ಬಾರಿಗೆ ಪ್ರಧಾನಮಂತ್ರಿಗಳಾಗಿ ಸುದೀರ್ಘವಾಗಿ ದೇಶ ಮುನ್ನಡೆಸುತ್ತಿದ್ದಾರೆ. ಮುಂದೆಯೂ ಕೂಡ ಈ ದೇಶವನ್ನು ಸದೃಢವಾಗಿ ಮುನ್ನಡೆಸಲಿದ್ದಾರೆ ಎಂದು ಹೇಳಿದ್ರು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…