ಜನ ಮನದ ನಾಡಿ ಮಿಡಿತ

Advertisement

ಮಂಡ್ಯ: ಎರಡು ತಿಂಗಳ ಹಿಂದೆ ಪ್ರೀತಿಸಿ ಮದುವೆ; ಯುವತಿ ಸಾವು

ಕೇವಲ ಎರಡು ತಿಂಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದ ಯುವತಿಯೊಬ್ಬರು ಜೀವ ಕಳೆದುಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕೆನ್ನಾಳು ಗ್ರಾಮದಲ್ಲಿ ನಡೆದಿದೆ.

ಇದಕ್ಕೆ ಗಂಡನೇ ಕಾರಣ ಎಂದು ಯುವತಿ ಕಡೆಯವರು ಆರೋಪ ಮಾಡಿದ್ದಾರೆ. ತಾಲೂಕಿನ ಬಲ್ಲೇನಹಳ್ಳಿ ಗ್ರಾಮದ ಪೂಜಾ (25) ನೇಣು ಬಿಗಿದುಕೊಂಡ ಯುವತಿಯಾಗಿದ್ದಾರೆ. ಪೂಜಾ ಹಾಗೂ ಕೆನ್ನಾಳು ಗ್ರಾಮದ ಅಭಿನಂದನ್ ಪ್ರೀತಿಸಿ ಮನೆಯವರ ವಿರೋಧದ ನಡುವೆಯೂ ಮದುವೆಯಾಗಿದ್ದರು. ಎರಡು ತಿಂಗಳ ಹಿಂದಷ್ಟೇ ಈ ಇಬ್ಬರು ಮದುವೆಯಾಗಿದ್ದು ಆದರೆ ಮದುವೆ ಬಳಿಕ ಗಂಡನ ಮನೆಯವರಿಂದ ಕಿರುಕುಳ ಆರೋಪವನ್ನು ಯುವತಿ ಕಡೆಯವರು ಮಾಡಿದ್ದಾರೆ.

ಇದು ಅಲ್ಲದೇ ನಿನ್ನೆ ರಾತ್ರಿ ಜೀವ ತೆಗೆದು ಬಳಿಕ ನೇಣು ಬಿಗಿದಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಈ ಸಂಬಂಧ ಮೃತ ಪೂಜಾ ಸಂಬಂಧಿಕರಿಂದ ಪಾಂಡವಪುರದ ಪೊಲೀಸ್ ಠಾಣೆ ಮುಂಭಾಗ ಗದ್ದಲ ಏರ್ಪಟ್ಟಿತ್ತು. ಎಫ್‌ಐಆರ್ ದಾಖಲಿಸಲು ತಡ ಮಾಡ್ತಿರುವ ಪೋಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. ತಕ್ಷಣ ದೂರು ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!