ಕೇವಲ ಎರಡು ತಿಂಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದ ಯುವತಿಯೊಬ್ಬರು ಜೀವ ಕಳೆದುಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕೆನ್ನಾಳು ಗ್ರಾಮದಲ್ಲಿ ನಡೆದಿದೆ.
ಇದಕ್ಕೆ ಗಂಡನೇ ಕಾರಣ ಎಂದು ಯುವತಿ ಕಡೆಯವರು ಆರೋಪ ಮಾಡಿದ್ದಾರೆ. ತಾಲೂಕಿನ ಬಲ್ಲೇನಹಳ್ಳಿ ಗ್ರಾಮದ ಪೂಜಾ (25) ನೇಣು ಬಿಗಿದುಕೊಂಡ ಯುವತಿಯಾಗಿದ್ದಾರೆ. ಪೂಜಾ ಹಾಗೂ ಕೆನ್ನಾಳು ಗ್ರಾಮದ ಅಭಿನಂದನ್ ಪ್ರೀತಿಸಿ ಮನೆಯವರ ವಿರೋಧದ ನಡುವೆಯೂ ಮದುವೆಯಾಗಿದ್ದರು. ಎರಡು ತಿಂಗಳ ಹಿಂದಷ್ಟೇ ಈ ಇಬ್ಬರು ಮದುವೆಯಾಗಿದ್ದು ಆದರೆ ಮದುವೆ ಬಳಿಕ ಗಂಡನ ಮನೆಯವರಿಂದ ಕಿರುಕುಳ ಆರೋಪವನ್ನು ಯುವತಿ ಕಡೆಯವರು ಮಾಡಿದ್ದಾರೆ.
ಇದು ಅಲ್ಲದೇ ನಿನ್ನೆ ರಾತ್ರಿ ಜೀವ ತೆಗೆದು ಬಳಿಕ ನೇಣು ಬಿಗಿದಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಈ ಸಂಬಂಧ ಮೃತ ಪೂಜಾ ಸಂಬಂಧಿಕರಿಂದ ಪಾಂಡವಪುರದ ಪೊಲೀಸ್ ಠಾಣೆ ಮುಂಭಾಗ ಗದ್ದಲ ಏರ್ಪಟ್ಟಿತ್ತು. ಎಫ್‌ಐಆರ್ ದಾಖಲಿಸಲು ತಡ ಮಾಡ್ತಿರುವ ಪೋಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. ತಕ್ಷಣ ದೂರು ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…