ಅತ್ಯಾಚಾರ ಆರೋಪ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಮತ್ತೆ ತಿರಸ್ಕಾರ ಮಾಡಿದೆ.

ಇದರಿಂದ ಪ್ರಜ್ವಲ್ ರೇವಣ್ಣ ಜೈಲಿನಲ್ಲೇ ಇರುವಂತೆ ಆಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಯನ್ನು ಇಂದು ವಿಚಾರಣೆ ಮಾಡಿದ ನ್ಯಾಯಾಲಯ ಜಾಮೀನು ನೀಡಲು ನಿರಾಕರಣೆ ಮಾಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಈ ಆದೇಶ ಹೊರಡಿಸಿದ್ದಾರೆ.

ಕಳೆದ 14 ತಿಂಗಳುಗಳಿಂದ ಪ್ರಜ್ವಲ್ ರೇವಣ್ಣ ಅವರು ಜೈಲಿನಲ್ಲಿದ್ದಾರೆ. ಹೀಗಾಗಿ ಬೇಲ್‌ಗಾಗಿ ಕೋರ್ಟ್ಗೆ ಮನವಿ ಮಾಡಿದ್ದರು. ಆದರೆ ಕೋರ್ಟ್ ಬೇಲ್ ನೀಡಿಲ್ಲ. ಈ ಹಿಂದೆ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.



