ಬಂಟ್ವಾಳ, ಜು. 26; ತಾಲೂಕಿನ ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ 27ರಂದು ನಡೆದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಖಲಂಧರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಭಂದಿಸಿದಂತೆ ಪೊಲೀಸರು 12ನೇ ಆರೋಪಿಯನ್ನು ಜು. 25ರಂದು ಬಂಧಿಸಿದ್ದಾರೆ.
ಪುದು ಗ್ರಾಮದ ರೊಟಿ ಗುಡ್ಡೆ ನಿವಾಸಿ ಸಚಿನ್ ಯಾನೆ ಸಚ್ಚು ರೊಟ್ಟಿಗುಡ್ಡೆ ಬಂಧಿತ ಆರೋಪಿಯಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಳಿಕ ಹೆಚ್ಚಿನ ವಿಚಾರಣೆ ನಡೆಸಲು ನ್ಯಾಯಾಲಯ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ಬಂಟ್ವಾಳ ಗ್ರಾಮಾಂತರ ಪೊಲೀಸರು 10 ಮಂದಿ ಆರೋಪಿಯನ್ನು ಬಂಧಿಸಿದ್ದರು. ಜು. 21ರಂದು 11ನೇ ಆರೋಪಿ ಅಮ್ಮುಂಜೆ ಗ್ರಾಮದ ಶಾಹಿತ್ ಯಾನೆ ಸಾಹಿತ್‌ನನ್ನು ಬಂಧಿಸಿ ಕಸ್ಟಡಿಗೆ ಪಡೆದಿದ್ದರು. ಪ್ರಾರಂಭದಲ್ಲಿ ಬಂಧಿತ ಬಹುತೇಕ ಎಲ್ಲಾ ಆರೋಪಿಗಳನ್ನು ಪೊಲೀಸರು ಕೆಲ ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದು, ಪ್ರಸ್ತುತ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…