ಕೆಲವು ತಿಂಗಳಿನಿ0ದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅರಣ್ಯ ಇಲಾಖೆಯ ತಾತ್ಕಾಲಿಕ ವಾಚ್‌ಮ್ಯಾನ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿ ಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ.
ವೇದವ್ಯಾಸ ಎಂಬವರು ಮೃತ ಪಟ್ಟವರಾಗಿದ್ದಾರೆ. ಕಾರ್ಕಳ ಕಸಬಾ ಗ್ರಾಮದ ಅನಂತ ಶಯನ ಎಂಬಲ್ಲಿ ತಮ್ಮ ಸೋದರಳಿಯ ಸುಮಂತ್ ಅವರ ಜತೆ ವಾಸವಾಗಿದ್ದರು. 12 ವರ್ಷಗಳಿಂದ ಅರಣ್ಯ ಇಲಾಖೆ ಯಲ್ಲಿ ತಾತ್ಕಾಲಿಕ ವಾಚ್‌ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ವೇದವ್ಯಾಸ ಅವರಿಗೆ ಕಳೆದ ವರ್ಷ ನವೆಂಬರ್‌ನಲ್ಲಿ ಕ್ಯಾನ್ಸರ್ ಕಾಯಿಲೆ ಇರುವುದು ಪತ್ತೆ ಯಾಗಿತ್ತು. ಅಂದಿನಿ0ದ ಮನೆಯಲ್ಲೇ ಉಳಿದುಕೊಂಡಿದ್ದ ಅವರು, ಕಾಯಿಲೆಯಿಂದ ತೀವ್ರ ಮನನೊಂದಿದ್ದರು. ಮಾ. 3ರಂದು ಮನೆಯಲ್ಲಿ ಯಾವುದೋ ವಿಷಕಾರಿ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ತತ್‌ಕ್ಷಣ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿದ್ದಾರೆ. ಇನ್ನು ಈ ಬಗ್ಗೆ ಕಾರ್ಕಳ ನಗರ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…