ಬಂಟ್ವಾಳ ತಾಲೂಕಿನಲ್ಲಿ ಭಾರೀ ಪ್ರಮಾಣದಲ್ಲಿ ವ್ಯಾಪಕ ಗಾಳಿ ಮಳೆಯಾಗುತ್ತಿದೆ. ತಾಲೂಕಿನ ವಿವಿಧೆಡೆ ಮನೆ ಹಾನಿ ಪ್ರಕರಣಗಳು ಸಂಭವಿಸಿದೆ. ನೇತ್ರಾವತಿ ನದಿಯಲ್ಲಿ ನೀರಿನ ಹರಿವು ತುಸು ಏರಿಕೆ ಕಂಡಿದ್ದು, ಸೋಮವಾರ ನದಿ ನೀರಿನ ಮಟ್ಟ 8.0 ಮೀಟರ್ ಗೆ ಏರಿಕೆಯಾಗಿದೆ. ನೀರಿನ ಮಟ್ಟ ನಿಧಾನವಾಗಿ ಏರಿಕೆಯಾಗುತ್ತಿದ್ದು, ನದಿ ತೀರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮಣಿಹಳ್ಳದಿಂದ ವಾಮದಪದವು ತೆರಳುವ ರಸ್ತೆ ಬದಿಯ ಗುಡ್ಡ ಜರಿದು ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಇರ್ವತ್ತೂರು ಗ್ರಾಮದ ವಿಶ್ವನಾಥ ಕೋಂ ಜಿನ್ನಪ್ಪ ಪೂಜಾರಿ ರವರ ವಾಸ್ತವ್ಯದ ಮನೆಯ ಬಳಿ ಗುಡ್ಡ ಕುಸಿದಿದ್ದು ಯಾವುದೇ ಜೀವ ಹಾನಿಯಾಗಿಲ್ಲ. ಕರೋಪಾಡಿ ಗ್ರಾಮದ ಒಡಿಯೂರು ಅಂಗನವಾಡಿ ಕೇಂದ್ರದ ಕಾಂಪೌಂಡ್ ಗೆ ಮರ ಬಿದ್ದು ಕಾಂಪೌಂಡ್ ಹಾನಿಯಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…