ಅರಬ್ಬಿ ಸಮುದ್ರದಲ್ಲಿ ಮೀನುಗಾರರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮುಳುಗಿ ಮೂವರು ನಾಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಸಂಭವಿಸಿದೆ.
ಈ ದೋಣಿಯು ಖಾಂಡೇರಿಯಿಂದ ಅಲಿಬಾಗ್ ಬಳಿಯ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ. ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ದೋಣಿ ಮಗುಚಿದೆ. ಕೂಡಲೇ ಎಚ್ಚೆತ್ತ ಮೀನುಗಾರರು ನೀರಿಗೆ ಹಾರಿದ್ದಾರೆ. 8 ಮಂದಿ ಮೀನುಗಾರರ ಪೈಕಿ 5 ಮಂದಿ ಈಜಿಕೊಂಡು ದಡ ಸೇರಿದ್ದಾರೆ.
ಕಾಣೆಯಾದವರಿಗಾಗಿ ಶೋಧಕಾರ್ಯ ಮುಂದುವರಿದಿದೆ. ನಾಪತ್ತೆಯಾಗಿರುವ ಮೂವರು ಮೀನುಗಾರರನ್ನು ಪತ್ತೆಹಚ್ಚಲು ಪೊಲೀಸರು ಮತ್ತು ಸ್ಥಳೀಯ ವಿಪತ್ತು ನಿರ್ವಹಣಾ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಜೊತೆಗೆ ಡ್ರೋನ್‌ಗಳನ್ನು ಸಹ ನಿಯೋಜಿಸಲಾಗಿದೆ. ಇನ್ನು ಈಜಿ ದಡ ಸೇರಿದ ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…