ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡಿನ ಯೂಟ್ಯೂಬರ್ ಸಾಲು ಕಿಂಗ್ ಅಲಿಯಾಸ್ ಮುಹಮ್ಮದ್ ಸಾಲಿ ಅರೆಸ್ಟ್….!

ಕಾಸರಗೋಡು: ಅಪ್ರಾಪ್ತ ಬಾಲಕಿಯನ್ನು ವಿವಾಹವಾಗುವುದಾಗಿ ಭರವಸೆ ನೀಡಿ ಅತ್ಯಾಚಾರ ಎಸಗಿದ ಆರೋಪದಲ್ಲಿ ಕಾಸರಗೋಡಿನ ಯೂಟ್ಯೂಬರ್ ನೋರ್ವನನ್ನು ಕೋಝಿಕ್ಕೋಡ್ ಕೊಯಿಲಾಂಡಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಕೊಡಿಯಮ್ಮೆ ಚೆಪ್ಪಿನಡ್ಕದ ಸಾಲು ಕಿಂಗ್ ಅಲಿಯಾಸ್ ಮುಹಮ್ಮದ್ ಸಾಲಿ(35) ಎಂದು ತಿಳಿದು ಬಂದಿದೆ.

ಆರೋಪಿಯು ವಿದೇಶದಿಂದ ಹಿಂದಿರುಗುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಸುಮಾರು ಏಳು ವರ್ಷಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸಾಲು ಕಿಂಗ್ ಮೀಡಿಯ, ಸಾಲು ಕಿಂಗ್ ವ್ಲಾಗ್ಸ್, ಸಾಲು ಕಿಂಗ್ ಫ್ಯಾಮಿಲಿ ಮೊದಲಾದ ಹೆಸರಿನಲ್ಲಿ ಸಕ್ರಿಯನಾಗಿದ್ದನು. ಇನ್ನು 2016 ರಲ್ಲಿ ಈತ ವಿವಾಹವಾಗಿದ್ದು, ಮೂವರು ಮಕ್ಕಳು ಕೂಡ ಇದ್ದಾರೆ.

ಈ ಮಧ್ಯೆ ಪತ್ನಿಯೊಂದಿಗೆ ಜಗಳ ಉಂಟಾಗಿದ್ದು, ಹದಿನೈದರ ಬಾಲಕಿ ಜೊತೆ ಈತ ಸಂಬಂಧ ಬೆಳೆಸಿದ್ದನು. ಬಾಲಕಿಯು ಇನ್‌ಸ್ಟಾಗ್ರಾಂ, ಸ್ನ್ಯಾಪ್ ಚಾಟ್ ಸಾಮಾಜಿಕ ಜಾಲತಾಣ ಮೂಲಕ ಪರಿಚಯವಾಗಿದ್ದಳು. ಬಳಿಕ ವಿವಾಹವಾಗುವ ಭರವಸೆ ನೀಡಿ ಅತ್ಯಾಚಾರ ಎಸಗಿದ್ದನು ಎಂದು ಹೇಳಲಾಗಿದೆ.

ಘಟನಾ ಸಂಬಂಧ ಪೊಲೀಸರು ಪೊಕ್ಸೊ ಪ್ರಕರಣ ದಾಖಲಿಸಿಕೊಳ್ಳುತ್ತಿದ್ದಂತೆ ಆರೋಪಿಯು ವಿದೇಶಕ್ಕೆ ಪರಾರಿಯಾಗಿದ್ದನು ಎಂದು ತಿಳಿದು ಬಂದಿದೆ.

ಈತನ ಬಂಧನಕ್ಕೆ ಕೊಯಿಲಾಂಡಿ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿಗೊಳಿಸಿದ್ದರು. ವಿದೇಶದಿಂದ ಶನಿವಾರ ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ ಕೊಯಿಲಾಂಡಿ ಪೊಲೀಸರು ಈತನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!