ಕಾಸರಗೋಡು: ಅಪ್ರಾಪ್ತ ಬಾಲಕಿಯನ್ನು ವಿವಾಹವಾಗುವುದಾಗಿ ಭರವಸೆ ನೀಡಿ ಅತ್ಯಾಚಾರ ಎಸಗಿದ ಆರೋಪದಲ್ಲಿ ಕಾಸರಗೋಡಿನ ಯೂಟ್ಯೂಬರ್ ನೋರ್ವನನ್ನು ಕೋಝಿಕ್ಕೋಡ್ ಕೊಯಿಲಾಂಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಕೊಡಿಯಮ್ಮೆ ಚೆಪ್ಪಿನಡ್ಕದ ಸಾಲು ಕಿಂಗ್ ಅಲಿಯಾಸ್ ಮುಹಮ್ಮದ್ ಸಾಲಿ(35) ಎಂದು ತಿಳಿದು ಬಂದಿದೆ.
ಆರೋಪಿಯು ವಿದೇಶದಿಂದ ಹಿಂದಿರುಗುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಸುಮಾರು ಏಳು ವರ್ಷಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸಾಲು ಕಿಂಗ್ ಮೀಡಿಯ, ಸಾಲು ಕಿಂಗ್ ವ್ಲಾಗ್ಸ್, ಸಾಲು ಕಿಂಗ್ ಫ್ಯಾಮಿಲಿ ಮೊದಲಾದ ಹೆಸರಿನಲ್ಲಿ ಸಕ್ರಿಯನಾಗಿದ್ದನು. ಇನ್ನು 2016 ರಲ್ಲಿ ಈತ ವಿವಾಹವಾಗಿದ್ದು, ಮೂವರು ಮಕ್ಕಳು ಕೂಡ ಇದ್ದಾರೆ.
ಈ ಮಧ್ಯೆ ಪತ್ನಿಯೊಂದಿಗೆ ಜಗಳ ಉಂಟಾಗಿದ್ದು, ಹದಿನೈದರ ಬಾಲಕಿ ಜೊತೆ ಈತ ಸಂಬಂಧ ಬೆಳೆಸಿದ್ದನು. ಬಾಲಕಿಯು ಇನ್‌ಸ್ಟಾಗ್ರಾಂ, ಸ್ನ್ಯಾಪ್ ಚಾಟ್ ಸಾಮಾಜಿಕ ಜಾಲತಾಣ ಮೂಲಕ ಪರಿಚಯವಾಗಿದ್ದಳು. ಬಳಿಕ ವಿವಾಹವಾಗುವ ಭರವಸೆ ನೀಡಿ ಅತ್ಯಾಚಾರ ಎಸಗಿದ್ದನು ಎಂದು ಹೇಳಲಾಗಿದೆ.
ಘಟನಾ ಸಂಬಂಧ ಪೊಲೀಸರು ಪೊಕ್ಸೊ ಪ್ರಕರಣ ದಾಖಲಿಸಿಕೊಳ್ಳುತ್ತಿದ್ದಂತೆ ಆರೋಪಿಯು ವಿದೇಶಕ್ಕೆ ಪರಾರಿಯಾಗಿದ್ದನು ಎಂದು ತಿಳಿದು ಬಂದಿದೆ.
ಈತನ ಬಂಧನಕ್ಕೆ ಕೊಯಿಲಾಂಡಿ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿಗೊಳಿಸಿದ್ದರು. ವಿದೇಶದಿಂದ ಶನಿವಾರ ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ ಕೊಯಿಲಾಂಡಿ ಪೊಲೀಸರು ಈತನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…