ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ರಾ.ಹೆದ್ದಾರಿಯಲ್ಲಿ ಅಗೆದ ಗುತ್ತಿಗೆ ಕಂಪೆನಿ..!!

ಬಂಟ್ವಾಳ; ಸತತವಾಗಿ ಅಪಘಾತಗಳಿಗೆ ಕಾರಣವಾಗಿದೆ ಎನ್ನಲಾದ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ನಿಂತಿರುವ ಕಾಂಕ್ರೀಟ್ ರಸ್ತೆಯಲ್ಲಿ ಮತ್ತೆ ಹೆದ್ದಾರಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪೆನಿಯ ಕೆಲಸಗಾರರಿಂದ ಅಗೆಯುವ ಕೆಲಸ ಆರಂಭವಾಗಿದೆ.

ಕುದ್ರೆಬೆಟ್ಟು ಎಂಬಲ್ಲಿ ಕಂಪನಿಯ ಅವೈಜ್ಞಾನಿಕ ಕಾಮಗಾರಿಯ ಪರಿಣಾಮ ನಿರಂತರವಾಗಿ ಅಪಘಾತಗಳು ನಡೆಯುತ್ತಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಮಾಧ್ಯಮಗಳಲ್ಲಿ ವರದಿಯನ್ನು ಮಾಡಲಾಗಿತ್ತು.ಇದೀಗ ಕಂಪೆನಿಯು ಕಾಂಕ್ರೀಟ್ ರಸ್ತೆಯಲ್ಲಿ ನೀರು ನಿಲ್ಲದಂತೆ ಕ್ರಮವಹಿಸಲು ಮುಂದಾಗಿದ್ದು, ಡಿವೈಡರ್‌ನ್ನು ಅಗೆದು ಗುಂಡಿ ಮಾಡುತ್ತಿದೆ. ಡಿವೈಡರ್‌ನ ಭಾಗದಲ್ಲಿ ತಾತ್ಕಾಲಿಕವಾಗಿ ನೀರು ಹರಿದುಹೋಗಲು ವ್ಯವಸ್ಥೆ ಕಲ್ಪಿಸುವುದಕ್ಕೆ ಗುತ್ತಿಗೆದಾರರು ಮುಂದಾಗಿದ್ದು, ಸದ್ಯದ ಮಟ್ಟಿಗೆ ಉಪಯೋಗವಾಗಬಹುದು ಎಂದು ಹೇಳಲಾಗುತ್ತಿದೆ. ಇಲ್ಲಿನ ಕಾಂಕ್ರೀಟ್ ರಸ್ತೆಯಲ್ಲಿ ನೀರು ನಿಂತ ಪರಿಣಾಮವಾಗಿ ವಾಹನ ಸವಾರರ ನಿಯಂತ್ರಣ ತಪ್ಪಿ ಅಪಘಾತಗಳು ಸಂಭವಿಸಿವೆ. ಎರಡು ದಿನಗಳ ಹಿಂದೆಯಷ್ಟೇ ಅಂಬ್ಯುಲೆನ್ಸ್ ವಾಹನ ಸಹಿತ ಎರಡು ವಾಹನಗಳು ನಿಯಂತ್ರಣ ಕಳೆದು ಪಲ್ಟಿಯಾಗಿದ್ದವು.ಅದೃಷ್ಟವಶಾತ್ ಯಾವುದೇ ಅಪಾಯವಾಗಿರಲಿಲ್ಲ. ಇದೀಗ ಈ ಬಗ್ಗೆ ಗಮನ ಹರಿಸಿದ ಕಂಪೆನಿಯು ಕಾಮಗಾರಿಯನ್ನು ಆರಂಭಿಸಿದೆ.ಇವರ ಯೋಜನೆ ಮತ್ತು ಯೋಚನೆ ಫಲಪ್ರದವಾಗಿ ಪರಿಣಮಿಸಬಹುದಾ ಎಂಬುವುದನ್ನು ಕಾದುನೋಡಬೇಕಾಗಿದೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!