ಶಾರದಾ ಸೇವಾ ಪ್ರತಿಷ್ಠಾನ ಹಾಗೂ ಉತ್ಸವ ಸಮಿತಿ ಕಲ್ಲಡ್ಕ ಇದರ ವತಿಯಿಂದ ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ಬಿಜೆಪಿ ಸಕ್ರೀಯ ಕಾರ್ಯಕರ್ತ,ಸಂಘದ ಸ್ವಯಂಸೇವಕ, ನಾಟಕ ಕಲಾವಿದ, ಶಾರದಾ ಪ್ರತಿಷ್ಠಾನದ ಸ್ಥಾಪಕ ಸದಸ್ಯ ಚಿ.ರಮೇಶ್ ಅವರಿಗೆ ನುಡಿನಮನ ಕಾರ್ಯಕ್ರಮ ಕಲ್ಲಡ್ಕ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ನುಡಿನಮನ ಕಾರ್ಯಕ್ರಮದಲ್ಲಿ ಆರ್.ಎಸ್.ಎಸ್.ಪ್ರಮುಖರಾದ ಶ್ರೀರಾಮ ವಿದ್ಯಾ ಕೇಂದ್ರದ ಸ್ಥಾಪಕರಾದ ಡಾ.ಪ್ರಭಾಕರ್ ಭಟ್ ಅವರು ಮಾತನಾಡಿ, ರಂಗಭೂಮಿಯೇ ಅವರಿಗೆ ಬದುಕಾಗಿತ್ತು, ಪ್ರತಿಯೊಂದು ಪಾತ್ರಕ್ಕೂ ಜೀವ ತುಂಬಿದ್ದಾರೆ. ಚಿ.ರಮೇಶ್ ಅವರು ಮಾಡುತ್ತಿದ್ದನಾಟಕದ ಪಾತ್ರ ಜೀವನದಲ್ಲಿ ನಾವು ಇರಬೇಕಾದ ಸಂದೇಶ ನೀಡುವ ಪಾತ್ರವಾಗಿತ್ತು ಅಮೂಲಕ ಜನರಿಗೆ ಹೆಚ್ಚು ಪ್ರಿಯರಾಗಿದ್ದು, ಅನೇಕ ಹಾಸ್ಯ ನಾಟಕಗಳ ಮೂಲಕ ಮಿಂಚಿದ್ರು. ನಾಟಕದಲ್ಲಿ ನಾನು ನೀಡುವ ಸಂದೇಶದಂತೆಯೇ ಬದುಕಬೇಕು ಎಂಬ ಕಲ್ಪನೆಯಲ್ಲಿ ಬದುಕು ಸಾಗಿಸಿದವರು.
ವೈಯಕ್ತಿಕ ಜೀವನದಲ್ಲಿ ಅನೇಕ ಕಷ್ಟಗಳಿದ್ದರು ಇತರರಿಗೆ ನೋವು ಕೊಟ್ಟವರಲ್ಲ, ನಗುಮೊಗದಿಂದ ಮಾತನಾಡುತ್ರಿದ್ದರು. ಅಜಾತಶತ್ರುವಾಗಿ ಬದುಕು ಕಳೆದವರು ಎಂದು ಅವರ ವೈಯಕ್ತಿಕ ಜೀವನದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…