ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಹೆದ್ದಾರಿ ಜಂಕ್ಷನ್ ಬಳಿ ಕಾರಿಗೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಪವಾಡ ಸದೃಶ ಪಾರಾಗಿದ್ದಾರೆ.
ಕಿನ್ನಿಗೋಳಿ ಕಡೆಯಿಂದ ಮುಲ್ಕಿ ಕಡೆಗೆ ಬರುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿ ಜಂಕ್ಷನ್ ಬಳಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದಾಗ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಎದುರು ಭಾಗ ಹಾನಿಯಾಗಿದ್ದು, ಕಾರಿನ ಚಾಲಕ ಮುಲ್ಕಿ ಕೊಳಚಿ ಕಂಬಳ ನಿವಾಸಿ ಅಲ್ತಾಫ್ ಹಾಗೂ ಮತ್ತೋರ್ವ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದ ಹೆದ್ದಾರಿ ಸಂಚಾರ ವ್ಯತ್ಯಯ ಉಂಟಾಗಿದ್ದು ಕೂಡಲೇ ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಪಘಾತಕ್ಕೀಡಾದ ಕಾರನ್ನು ಸ್ಥಳೀಯರ ನೆರವಿನೊಂದಿಗೆ ತೆರವುಗೊಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಚತುಷ್ಪಥಗೊಂಡ ಬಳಿಕ ಮುಲ್ಕಿ ಬಸ್ ನಿಲ್ದಾಣ ಜಂಕ್ಷನ್, ಬಪ್ಪನಾಡು ಹಾಗೂ ವಿಜಯ ಸನ್ನಿಧಿ ಹೆದ್ದಾರಿ ಜಂಕ್ಷನ್ ಬಳಿ ಅನೇಕ ಅಪಘಾತಗಳು ಸಂಭವಿಸುತ್ತಿದ್ದು ಹೆದ್ದಾರಿ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಆಟೋ ಚಾಲಕ ಮೋಹನ್ ಕುಬೆವೂರು ಒತ್ತಾಯಿಸಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…