ಜನ ಮನದ ನಾಡಿ ಮಿಡಿತ

Advertisement

ಪುಟಾಣಿ ಹೆಣ್ಣು ಮಕ್ಕಳಿಗೂ ಸಮಾಜದಲ್ಲಿ ರಕ್ಷಣೆಯಿಲ್ಲ

ಈಗಂತೂ ಮಹಿಳೆಯರು ಒಬ್ಬಂಟಿಯಾಗಿ ಓಡಾಡುವುದೇ ಕಷ್ಟಸಾಧ್ಯವಾಗಿದೆ. ಮಹಿಳೆಯರು ಮಾತ್ರವಲ್ಲ, ಪುಟ್ಟ ಬಾಲಕಿಯರಿಗೂ ಸಮಾಜದಲ್ಲಿ ಸುರಕ್ಷತೆಯಿಲ್ಲ ಎಂದು ತೋರಿಸುವಂತಹ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ವ್ಯಕ್ತಿಯೊಬ್ಬ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಗೆ ಮುತ್ತಿಟ್ಟು ಕಿರುಕುಳ ನೀಡಿದ್ದಾನೆ.

ಈತನ ಈ ದುಷ್ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಕೆಲವೊಂದು ಅಹಿತಕರ ಘಟನೆಗಳನ್ನು ನೋಡಿದಾಗ ಈ ಸಮಾಜದಲ್ಲಿ ಮಹಿಳೆಯರಿಗೆ ಸುರಕ್ಷತೆಯಿಲ್ಲ ಎಂದೆನಿಸುತ್ತದೆ. ಆದ್ರೆ ಇಲ್ಲೊಂದು ನಡೆದಿರುವ ನಾಚಿಕೆಗೇಡಿನ ಸಂಗತಿಯನ್ನು ನೋಡಿದರೆ ಮಹಿಳೆಯರಷ್ಟೇ ಅಲ್ಲ, ಪುಟ್ಟ ಹೆಣ್ಣು ಮಕ್ಕಳಿಗೂ ಸಮಾಜದಲ್ಲಿ ಸುರಕ್ಷತೆಯಿಲ್ಲ ಎಂದೆನಿಸುತ್ತದೆ. ಇಂತಹದ್ದೊಂದು ಘಟನೆ ಪಾಕಿಸ್ತಾನದಲ್ಲಿ ನಡೆದಿದ್ದು, ಕಾಮುಕನೊಬ್ಬ ರಸ್ತೆಯಲ್ಲಿ ನಡೆದುಕೊಂಡು ಹೋಗ್ತಿದ್ದ ಪುಟ್ಟ ಬಾಲಕಿಗೆ ಮುತ್ತಿಟ್ಟು ಆಕೆಗೆ ಕಿರುಕುಳ ನೀಡಿದ್ದಾನೆ. ಈತನ ಈ ದುಷ್ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಘಟನೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.ತನ್ನ ತಮ್ಮನೊಂದಿಗೆ ಪುಟ್ಟ ಬಾಲಕಿಯೊಬ್ಬಳು ಎಲ್ಲಿಗೋ ನಡೆದುಕೊಂಡು ಹೋಗುತ್ತಿದ್ದ ವೇಳೆ, ಇತ್ತ ಕಡೆಯಿಂದ ಬರುತ್ತಿದ್ದ ವ್ಯಕ್ತಿಯೊಬ್ಬ ಯಾರ ಭಯವೂ ಇಲ್ಲದೆ ರಾಜಾರೋಷವಾಗಿ ಆ ಬಾಲಕಿಗೆ ಮುತ್ತಿಟ್ಟು ಕಿರುಕುಳ ನೀಡಿದ್ದಾನೆ. ಈ ಘಟನೆ ಜುಲೈ 25 ರಂದು ಪಾಕಿಸ್ತಾನದ ಕಸೂರ್‌ನ ಶಾ ಇನಾಯತ್ ಕಾಲೋನಿಯಲ್ಲಿ ನಡೆದಿದ್ದು ಎಂದು ಹೇಳಲಾಗುತ್ತಿದೆ. ಈತನ ರಾಕ್ಷಸತನವನ್ನು ಕಂಡು ಆ ಪುಟ್ಟ ಹುಡುಗಿಯ ತಮ್ಮ ಜೋರಾಗಿ ಅತ್ತಿದ್ದು, ಈ ದೃಶ್ಯ ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!