ಈಗಂತೂ ಮಹಿಳೆಯರು ಒಬ್ಬಂಟಿಯಾಗಿ ಓಡಾಡುವುದೇ ಕಷ್ಟಸಾಧ್ಯವಾಗಿದೆ. ಮಹಿಳೆಯರು ಮಾತ್ರವಲ್ಲ, ಪುಟ್ಟ ಬಾಲಕಿಯರಿಗೂ ಸಮಾಜದಲ್ಲಿ ಸುರಕ್ಷತೆಯಿಲ್ಲ ಎಂದು ತೋರಿಸುವಂತಹ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ವ್ಯಕ್ತಿಯೊಬ್ಬ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಗೆ ಮುತ್ತಿಟ್ಟು ಕಿರುಕುಳ ನೀಡಿದ್ದಾನೆ.
ಈತನ ಈ ದುಷ್ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಕೆಲವೊಂದು ಅಹಿತಕರ ಘಟನೆಗಳನ್ನು ನೋಡಿದಾಗ ಈ ಸಮಾಜದಲ್ಲಿ ಮಹಿಳೆಯರಿಗೆ ಸುರಕ್ಷತೆಯಿಲ್ಲ ಎಂದೆನಿಸುತ್ತದೆ. ಆದ್ರೆ ಇಲ್ಲೊಂದು ನಡೆದಿರುವ ನಾಚಿಕೆಗೇಡಿನ ಸಂಗತಿಯನ್ನು ನೋಡಿದರೆ ಮಹಿಳೆಯರಷ್ಟೇ ಅಲ್ಲ, ಪುಟ್ಟ ಹೆಣ್ಣು ಮಕ್ಕಳಿಗೂ ಸಮಾಜದಲ್ಲಿ ಸುರಕ್ಷತೆಯಿಲ್ಲ ಎಂದೆನಿಸುತ್ತದೆ. ಇಂತಹದ್ದೊಂದು ಘಟನೆ ಪಾಕಿಸ್ತಾನದಲ್ಲಿ ನಡೆದಿದ್ದು, ಕಾಮುಕನೊಬ್ಬ ರಸ್ತೆಯಲ್ಲಿ ನಡೆದುಕೊಂಡು ಹೋಗ್ತಿದ್ದ ಪುಟ್ಟ ಬಾಲಕಿಗೆ ಮುತ್ತಿಟ್ಟು ಆಕೆಗೆ ಕಿರುಕುಳ ನೀಡಿದ್ದಾನೆ. ಈತನ ಈ ದುಷ್ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಘಟನೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.ತನ್ನ ತಮ್ಮನೊಂದಿಗೆ ಪುಟ್ಟ ಬಾಲಕಿಯೊಬ್ಬಳು ಎಲ್ಲಿಗೋ ನಡೆದುಕೊಂಡು ಹೋಗುತ್ತಿದ್ದ ವೇಳೆ, ಇತ್ತ ಕಡೆಯಿಂದ ಬರುತ್ತಿದ್ದ ವ್ಯಕ್ತಿಯೊಬ್ಬ ಯಾರ ಭಯವೂ ಇಲ್ಲದೆ ರಾಜಾರೋಷವಾಗಿ ಆ ಬಾಲಕಿಗೆ ಮುತ್ತಿಟ್ಟು ಕಿರುಕುಳ ನೀಡಿದ್ದಾನೆ. ಈ ಘಟನೆ ಜುಲೈ 25 ರಂದು ಪಾಕಿಸ್ತಾನದ ಕಸೂರ್‌ನ ಶಾ ಇನಾಯತ್ ಕಾಲೋನಿಯಲ್ಲಿ ನಡೆದಿದ್ದು ಎಂದು ಹೇಳಲಾಗುತ್ತಿದೆ. ಈತನ ರಾಕ್ಷಸತನವನ್ನು ಕಂಡು ಆ ಪುಟ್ಟ ಹುಡುಗಿಯ ತಮ್ಮ ಜೋರಾಗಿ ಅತ್ತಿದ್ದು, ಈ ದೃಶ್ಯ ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…