ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಗಾಳಿ ಮಳೆಯಿಂದ ಅಲ್ಲಲ್ಲಿ ಹಾನಿಗಲಿ ಸಂಭವಿಸಿದೆ. ಉಡುಪಿ ಜಿಲ್ಲೆಯಲ್ಲಿ ಗಾಳಿ ಮಳೆ ಮುಂದುವರಿದಿದ್ದು, ಮಧ್ಯರಾತ್ರಿ ಬೀಸಿದ ಭಾರೀ ಗಾಳಿ ಮಳೆಗೆ ಕಕ್ಕುಂಜೆಯಲ್ಲಿ ಬೃಹತ್ ಮರವೊಂದು ಮನೆಯ ಮೇಲೆ ಬಿದ್ದಿದೆ. ಇದರಿಂದ ಮನೆಗೆ ಭಾರೀ ಹಾನಿಉಂಟಾಗಿದೆ.

ವಿಪರೀತ ಗಾಳಿಯ ಕಾರಣದಿಂದಲಾಗಿ ಏಕಾಏಕಿ ಮನೆಯ ಮೇಲೆ ಮರ ಬಿದ್ದಿದೆ ಎಂದು ತಿಳಿದು ಬಂದಿದೆ. ಸುಧಾಕರ್ ಎಂಬವರ ಮನೆ ಇದಾಗಿದ್ದು, ಮನೆಯಲ್ಲಿದ್ದ ನಾಲ್ವರು ಸದಸ್ಯರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯ ಮೇಲ್ಛಾವಣಿಗೆ ಹೊಡೆತ ಬಿದ್ದಿದೆ.



