ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ಇಂದು ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹೋಲಿ ಫ್ಯಾಮಿಲಿ ಪ್ರೌಢಶಾಲೆ ಸುರತ್ಕಲ್ಲಿನಲ್ಲಿ ನಡೆದ ಮಂಗಳೂರು ಉತ್ತರ ವಲಯದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಟೀಲು ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇದರಲ್ಲಿ ಸಮೃದ್ಧಿ ಎ.ಎಸ್.(9ನೇ ತರಗತಿ)36 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಲ್ಲದೆ ಈವರೆಗೆ ಮೂರು ಬಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು ಒಂದು ಬಾರಿ ರಾಷ್ಟ್ರಮಟ್ಟದಲ್ಲೂ ಭಾಗವಹಿಸಿದ ಕರಾಟೆ ಪಟು ಎಂದೆನಿಸಿಕೊಂಡಿದ್ದಾರೆ. ಹಾಗೆಯೇ ವೀಕ್ಷಾ ಜೆ. ಕಟೀಲ್ (9ನೇ ತರಗತಿ) -60 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇನ್ನು ಪೂರ್ವಿ ಪಿ. ಶೆಟ್ಟಿ (10ನೇ ತರಗತಿ) 54 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ, ಸಾತ್ತ್ವಿಕಾ (8ನೇ ತರಗತಿ) 38 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಇನ್ನು ಈ ಎಲ್ಲಾ ಕಟೀಲು ಶಾಲೆಯ ವಿದ್ಯಾರ್ಥಿಗಳು ಕರಾಟೆ ಶಿಕ್ಷಕ ಮೋರ್ಗನ್ ವಿಲಿಯಮ್ಸ್ ಕಿನ್ನಿಗೋಳಿ ಇವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾರೆ.
ವಿಜೇತರಿಗೆ ಆಡಳಿತ ಮಂಡಳಿ ಹಾಗೂ ಇಂಗ್ಲಿಷ್ ಮಾಧ್ಯಮ ಪ್ರೌಢ ಶಾಲೆ ಅಭಿನಂದನೆಗಳನ್ನು ಸಲ್ಲಿಸಿದೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…