38 ತಿಂಗಳ ಹಿಂಬಾಕಿ, ಹೊಸ ವೇತನ ಪರಿಷ್ಕರಣೆ, 2021 ರ ಮುಷ್ಕರದ ವೇಳೆ ವಜಾ ಮಾಡಲಾದ ನೌಕರರ ಮರು ನೇಮಕಾತಿಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿದೆ.
ಆಗಸ್ಟ್ 5 ರಿಂದ ನಾಲ್ಕು ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ನಿರ್ಧಾರ ಮಾಡಿದ್ದು, ಈಗಾಗಲೇ ಸಿಎಂ ಹಾಗೂ ನಾಲ್ಕು ನಿಗಮದ ಎಂಡಿಗಳಿಗೆ ನೊಟೀಸ್ ನೀಡಿದ್ದಾರೆ. ಸಾರಿಗೆ ನೌಕರರ ಪ್ರಮುಖ ಎರಡು ಬೇಡಿಕೆಗಳೆಂದರೆ, ಬಾಕಿ ವೇತನ ಬಿಡುಗಡೆ ಮತ್ತು ಹೊಸ ವೇತನದಲ್ಲಿ ಪರಿಷ್ಕರಣೆ ಮಾಡಬೇಕು ಎಂಬುದಾಗಿದೆ. ಇದನ್ನು ಶೀಘ್ರ ಮಾಡುವಂತೆ ನೌಕರರು ಆಗ್ರಹಿಸಿದ್ದಾರೆ. ಮಾಡದಿದ್ದರೆ ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸುವುದು ಎಚ್ಚರಿಸಿದ್ದಾರೆ. ನಾವು ಎಸ್ಮಾ, ವಜಾಗೊಳಿಸುವ ತಂತ್ರಗಳಿಗೆ ಹೆದರುವ ಮಾತೇ ಇಲ್ಲ ಎಂದು ಫ್ರೀಡಂ ಪಾರ್ಕ್ನಲ್ಲಿ ಸಾಮೂಹಿಕ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಸರ್ಕಾರಕ್ಕೆ ಸಾರಿಗೆ ನೌಕರರು ಎಚ್ಚರಿಕೆ ನೀಡಿದ್ದಾರೆ. ಒಟ್ಟಿನಲ್ಲಿ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆ ಮೂಲಕ ಶಕ್ತಿ ತುಂಬಿದ್ದ ಸರ್ಕಾರ, ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುತ್ತದೆಯೇ ಅಥವಾ ಹಿಂದಿನಂತೆ ಮನವೊಲಿಸಿ ಮುಷ್ಕರ ವಾಪಸ್ಸು ಪಡೆಯುವಂತೆ ಮಾಡುತ್ತದೆಯಾ ಎಂಬುದನ್ನು ನೋಡಬೇಕಿದೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…