ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯನ ಶೋಧ ಕಾರ್ಯ ಮುಂದುವರೆದಿದೆ.
ಈತ ಜುಲೈ 28 ರಂದು ಮನೆಯಿಂದ ಕೆಲಸಕ್ಕೆ ಹೋದವ ನಾಪತ್ತೆಯಾಗಿದ್ದ. ಆತನ ದ್ವಿಚಕ್ರ ವಾಹನವೊಂದು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ಅನಾಥವಾಗಿ ಸಿಕ್ಕಿತ್ತು. ಹೇಮಂತ್ ನಾಪತ್ತೆಯಾಗಿರುವ ಬಗ್ಗೆ ಸಂಶಯಗೊಂಡ ಪೊಲೀಸ್ ಇಲಾಖೆ, ಅಗ್ನಿಶಾಮಕದಳದ ಸಿಬ್ಬಂದಿ ನಿನ್ನೆ ಸಂಜೆಯವರೆಗೂ ನದಿಯಲ್ಲಿ ಹಾಗೂ ಇತರ ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ.
ಆದರೆ ಯಾವುದೇ ಸುಳಿವು ಸಿಗದ ಹಿನ್ನಲೆಯಲ್ಲಿ ಮತ್ತೆ ಇಂದು ಬೆಳಗ್ಗೆಯಿಂದ ನೇತ್ರಾವತಿ ನದಿ ತೀರದಲ್ಲಿ ತುಂಬೆ, ಸಜೀಪ, ಫರಂಗಿಪೇಟೆಗೆ ಶೋಧ ಕಾರ್ಯ ಮುಂದುವರಿಸಲಾಗಿದೆ. ಆದರೆ ಇಂದು ಕೂಡ ಹೇಮಂತ್ ನ ಸುಳಿವು ಸಿಕ್ಕಿಲ್ಲ ಎಂದು ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ತಿಳಿಸಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…