ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಹಾಗೂ ಅದರ ಬೆಂಗಾವಲಿಗೆ ಬಳಕೆ ಮಾಡುತ್ತಿದ್ದ ಸ್ಕೂಟರ್‌ನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳವಾರದಂದು ಪೊಲೀಸ್ ಉಪನಿರೀಕ್ಷಕ ಶಿವಕುಮಾರ್ ಅವರು ವಾಹನಗಳ ತಪಾಸಣೆ ನಡೆಸುತ್ತಿದ್ದಾಗ ಆಡಂಕುದ್ರುವಿನ ಚಾಪೆಲ್ ಚರ್ಚ್ ರಸ್ತೆಯಲ್ಲಿ ಬೆಳಗ್ಗೆ 6.30ಕ್ಕೆ ಬರುತ್ತಿದ್ದ ಪಿಕಪ್‌ನ ಚಾಲಕನು ಪೊಲೀಸರನ್ನು ಕಂಡು ವಾಹನವನ್ನು ನಿಲ್ಲಿಸಿ ಕೆಳಗೆ ಇಳಿದು ಓಡಿ ಹೋಗಿದ್ದಾನೆ. ಅದರ ಹಿಂದಿನಿಂದ ಬರುತ್ತಿದ್ದ ಸ್ಕೂಟರ್‌ನ ಸವಾರ ನೌಷದ್ ಆಲಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆತ ತಾನು ಸುನೀಲ್ ಡಿಸೋಜಾರೊಂದಿಗೆ ಸೇರಿ ಆಡಂಕುದ್ರುವಿನಲ್ಲಿ ನೇತ್ರಾವತಿ ನದಿಯ ತೀರದಿಂದ ಮರಳು ತುಂಬಿಸಿಕಕೊಂಡು ಹೋಗುತ್ತಿದ್ದು ಪಿಕಪ್ ವಾಹನಕ್ಕೆ ಸ್ಕೂಟರ್‌ನ್ನು ಬೆಂಗವಲಾಗಿ ಬಳಕೆ ಮಾಡುತ್ತಿರುವುದಾಗಿ ತಿಳಿಸಿದ್ದಾನೆ. ಆರೋಪಿಗಳು ರಾಜ್ಯ ಸರಕಾರಕ್ಕೆ ರಾಜಧನ ಪಾವತಿಸದೆ ಮರಳನ್ನು ಕಳ್ಳತನ ಮಾಡಿಕೊಂಡು ಹೋಗುತ್ತಿರುವುದು ಖಚಿತವಾಗಿದೆ. ಪಿಕಪ್ ವಾಹನ, ಸುಮಾರು 40 ಬುಟ್ಟಿ ಮರಳು ಮತ್ತು ಸ್ಕೂಟರ್‌ನ್ನು ವಶಪಡಿಸಿಕೊಳ್ಳಳಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…