ಕರಾವಳಿ

ಮಂಗಳೂರು: ಅಕ್ರಮ ಮರಳು ಸಾಗಾಟ – ಆರೋಪಿ ಬಂಧನ

ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಹಾಗೂ ಅದರ ಬೆಂಗಾವಲಿಗೆ ಬಳಕೆ ಮಾಡುತ್ತಿದ್ದ ಸ್ಕೂಟರ್‌ನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳವಾರದಂದು ಪೊಲೀಸ್ ಉಪನಿರೀಕ್ಷಕ ಶಿವಕುಮಾರ್ ಅವರು ವಾಹನಗಳ ತಪಾಸಣೆ ನಡೆಸುತ್ತಿದ್ದಾಗ ಆಡಂಕುದ್ರುವಿನ ಚಾಪೆಲ್ ಚರ್ಚ್ ರಸ್ತೆಯಲ್ಲಿ ಬೆಳಗ್ಗೆ 6.30ಕ್ಕೆ ಬರುತ್ತಿದ್ದ ಪಿಕಪ್‌ನ ಚಾಲಕನು ಪೊಲೀಸರನ್ನು ಕಂಡು ವಾಹನವನ್ನು ನಿಲ್ಲಿಸಿ ಕೆಳಗೆ ಇಳಿದು ಓಡಿ ಹೋಗಿದ್ದಾನೆ. ಅದರ ಹಿಂದಿನಿಂದ ಬರುತ್ತಿದ್ದ ಸ್ಕೂಟರ್‌ನ ಸವಾರ ನೌಷದ್ ಆಲಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆತ ತಾನು ಸುನೀಲ್ ಡಿಸೋಜಾರೊಂದಿಗೆ ಸೇರಿ ಆಡಂಕುದ್ರುವಿನಲ್ಲಿ ನೇತ್ರಾವತಿ ನದಿಯ ತೀರದಿಂದ ಮರಳು ತುಂಬಿಸಿಕಕೊಂಡು ಹೋಗುತ್ತಿದ್ದು ಪಿಕಪ್ ವಾಹನಕ್ಕೆ ಸ್ಕೂಟರ್‌ನ್ನು ಬೆಂಗವಲಾಗಿ ಬಳಕೆ ಮಾಡುತ್ತಿರುವುದಾಗಿ ತಿಳಿಸಿದ್ದಾನೆ. ಆರೋಪಿಗಳು ರಾಜ್ಯ ಸರಕಾರಕ್ಕೆ ರಾಜಧನ ಪಾವತಿಸದೆ ಮರಳನ್ನು ಕಳ್ಳತನ ಮಾಡಿಕೊಂಡು ಹೋಗುತ್ತಿರುವುದು ಖಚಿತವಾಗಿದೆ. ಪಿಕಪ್ ವಾಹನ, ಸುಮಾರು 40 ಬುಟ್ಟಿ ಮರಳು ಮತ್ತು ಸ್ಕೂಟರ್‌ನ್ನು ವಶಪಡಿಸಿಕೊಳ್ಳಳಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…

3 hours ago

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…

1 day ago

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…

1 day ago

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…

1 day ago

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…

1 day ago

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…

1 day ago