ಭಾರತೀಯ ಜನತಾ ಪಾರ್ಟಿ ಮತ್ತು ಗುರ್ಮೆ ಸುರೇಶ್ ಶೆಟ್ಟಿ ಅಭಿಮಾನಿ ಬಳಗ ಕುರ್ಕಾಲು, ಕುಂಜಾರುಗಿರಿ ಬೂತ್ ಸಂಖ್ಯೆ 97 ರ ಕಾರ್ಯಕರ್ತರಿಂದ ಇಂದು ದಿನಾಂಕ 24-07-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ ಎಂ.ಜಿ ನಾಗೇಂದ್ರ ಅವರ ಮನೆಯಲ್ಲಿ ನಡೆಯಿತು.


ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶಾಸಕರು ನನ್ನ ಮೇಲೆ ವಿಶ್ವಾಸವಿಟ್ಟು ಮತ ಚಲಾಯಿಸಿ ನನ್ನನ್ನು ಗೆಲ್ಲಿಸಿದ್ದಿರಿ. ಈ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಎಸ್.ಸಿ ಮೋರ್ಚಾದ ಅಧ್ಯಕ್ಷರಾದ ಎಂ.ಸಿ ನಾಗೇಂದ್ರ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಸುಮಲತಾ ಶೆಟ್ಟಿ, ಕುರ್ಕಾಲು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ವಿಶ್ವನಾಥ್ ಕುರ್ಕಾಲು, ಬೂತ್ ಅಧ್ಯಕ್ಷರಾದ ಪ್ರಶಾಂತ್ ಕುಲಾಲ್, ಕಾರ್ಯದರ್ಶಿಗಳಾದ ನಿಖಿಲ್ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.



