ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ನೀಡಲಾಗುತ್ತಿರುವ ಪ್ರತಿಷ್ಠಿತ ಸುವರ್ಣ ಸಂಭ್ರಮ ಗೌರವ ಪ್ರಶಸ್ತಿಗೆ ಮೂಡುಬಿದಿರೆಯ ಆಳ್ವಾಸ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಅವರು ಆಯ್ಕೆಯಾಗಿದ್ದಾರೆ.
ಶಿಕ್ಷಣ, ಕಲೆ, ಸಾಂಸ್ಕೃತಿಕ, ಆರೋಗ್ಯ ಕ್ಷೇತ್ರದಲ್ಲಿ ಅವರು ನಾಡಿಗೆ ನೀಡಿದ ಅತ್ಯಪೂರ್ವ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಆ.6 ರಂದು ಮಂಗಳೂರಿನ ಕುದ್ಮುಲ್ ರಂಗ ರಾವ್ ಪುರಭವನ ದಲ್ಲಿ ನಡೆಯುವ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಉಪ ಮುಖ್ಯಮಂತ್ರಿ ಡಿ .ಕೆ. ಶಿವ ಕುಮಾರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ .ಅಶೋಕ್ ಸಹಿತ ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಸುವರ್ಣ ಸಂಭ್ರಮ ಸಮಿತಿಯ ಪ್ರಧಾನ ಸಂಚಾಲಕ ಪಿ.ಬಿ. ಹರೀಶ್ ರೈ ತಿಳಿಸಿದ್ದಾರೆ.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…