ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಹೇಮಂತ್ ಮೃತದೇಹ ಪತ್ತೆ

ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಕಡೇಶಿವಾಲಯ ನಿವಾಸಿ 21ವರ್ಷದ ಹೇಮಂತ್ ಆಚಾರ್ಯ ಎಂಬಾತನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.

ಕಂಕನಾಡಿ ಪೋಲೀಸ್ ಠಾಣಾ ವ್ಯಾಪ್ತಿಯ ಬಜಾಲ್ ಮುಗೇರು ಎಂಬಲ್ಲಿ ನೇತ್ರಾವತಿ ನದಿ ಮಧ್ಯ ಭಾಗದಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜುಲೈ 27ರಂದು ಹೇಮಂತ್ ಮನೆಯಿಂದ ನಾಪತ್ತೆಯಾಗಿದ್ದ, ಈ ಬಗ್ಗೆ ಜುಲೈ 28ರಂದು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನಿಂದ ಹೇಮಂತ್‌ಗಾಗಿ ಹುಡುಕಾಟ ನಡೆದಿತ್ತು. ಇನ್ನು ಜುಲೈ 31ರಂದು ಮತ್ತೆ ಕಡೇಶಿವಾಲಯ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಪ್ರಮುಖರಾದ ಸಂಪತ್ ಸುವರ್ಣ ಅವರ ಮುತುವರ್ಜಿಯಿಂದ ಈಶ್ವರ ಮಲ್ಪೆ ಅವರ ತಂಡವನ್ನು ಹಾಗೂ ಎನ್.ಡಿ.ಆರ್.ಎಫ್ ತಂಡವನ್ನು ಕರೆಸಿಕೊಂಡು ಅಗ್ನಿಶಾಮಕ ದಳದ ಜೊತೆ ಜಂಟಿಯಾಗಿ ಸ್ಥಳೀಯ ಈಜುಗಾರ ನಿಸಾರ್ ಅವರೊಂದಿಗೆ ಜಕ್ರಿಬೆಟ್ಟುವಿನಿಂದ ತುಂಬೆವರೆಗೂ ಶೋಧ ನಡೆಸಿತ್ತು. ಅದರಲ್ಲಿ ಯಾವುದೇ ರೀತಿಯ ಪ್ರಯೋಜನವಾಗಿರದ ಹಿನ್ನೆಲೆಯಲ್ಲಿ ಮಧ್ಯಾಹ್ನದ ಬಳಿಕ ತುಂಬೆ ಡ್ಯಾಂ ನಿಂದ ಕೆಳಭಾಗದಲ್ಲಿ ಮೂರು ತಂಡಗಳ ಜೊತೆಯಲ್ಲಿ ಡ್ರೋನ್ ಬಳಸಿ ಶೋಧ ಕಾರ್ಯ ನಡೆಸಲಾಗಿತ್ತು. ಸಂಜೆ ವೇಳೆ ಡ್ರೋನ್‌ನ ಕಣ್ಣಿಗೆ ಶವವೊಂದು ತೇಲಾಡುವ ಕಂಡಿದ್ದು, ನದಿಯಲ್ಲಿ ಶೋಧ ಕಾರ್ಯದಲ್ಲಿ ತೊಡಗಿದ್ದ ತಂಡ ಈತನ ಮೃತದೇಹವನ್ನು ನದಿಯಿಂದ ಮೇಲಕ್ಕೆತ್ತಿದೆ.

 

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!