ಸುಮಾರು 2.2 ಲಕ್ಷ ರೂ ಮೌಲ್ಯದ ಅಡಿಕೆಯನ್ನು ಮಣಿನಾಲ್ಕೂರು ಗ್ರಾಮದ ಪುಂಜೂರು ಎಂಬಲ್ಲಿ ಜುಲೈ 3ರಿಂದ 22ರ ಅವಧಿಯಲ್ಲಿ ಕಳವು ಮಾಡಲಾದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರ ಯಶಸ್ವಿಯಾಗಿದ್ದಾರೆ.

ಆರೋಪಿಗಳಲ್ಲಿ ಒರ್ವನಾದ ಸುಳ್ಯ ತಾಲೂಕಿನ ಪೈಚಾರು ಗ್ರಾಮದ 29ವರ್ಷದ ಸತೀಶ್ನನ್ನು ಪೊಲೀಸರು ಬಂಧಿಸಿ, ಕಳವುಗೈದ 74,000 ಮೌಲ್ಯದ 15 ಚೀಲ ಒಣ ಅಡಿಕೆ ಸೇರಿದಂತೆ ಕೃತ್ಯಕ್ಕೆ ಬಳಸಿದ ಹಲವು ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯನ್ನು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.



