ಪ್ರಗತಿನಗರದ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟಿ.ಟಿ ವಾಹನದ ಚಾಲಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿ ಮಾರುಥಿ ವೀಥಿಕಾದಲ್ಲಿ ಸಂಭವಿಸಿದೆ.
ಮೃತಚಾಲಕನನ್ನು ಕಾರ್ಕಳ ನೀರೆ ಬೈಲೂರಿನ 65ವರ್ಷದ ಮೊಯ್ದಿನ್ ಬಾವ ಎಂದು ಗುರುತಿಸಲಾಗಿದೆ. ಟಿಟಿ ವಾಹನದಲ್ಲಿ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಮೊಯ್ದಿನ್ ಅವರಿಗೆ ಏಕಾಏಕಿಯಾಗಿ ಎದೆ ನೋವು ಕಾಣಿಸಿಕೊಂಡಿದೆ. ಮಾರುಥಿ ವೀಥಿಕಾದಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರನ್ನು ಕಂಡು ವಾಹನ ನಿಲ್ಲಿಸಿ ಎದೆನೋವಿನ ವಿಚಾರವನ್ನು ಒಳಕಾಡು ಅವರಲ್ಲಿ ಹೇಳಿಕೊಂಡಿದ್ದಾರೆ. ತಕ್ಷಣ ಒಳಕಾಡು ಅವರು ಅಂಬುಲೆನ್ಸ್ ವಾಹನದಲ್ಲಿ ಚಾಲಕನನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ರು. ಆದರೆ ಪರೀಕ್ಷಿಸಿದ ವೈದ್ಯರು ಚಾಲಕ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಒಳಕಾಡು ಅವರು ತುರ್ತು ಸಂದರ್ಭದಲ್ಲಿ ಚಾಲಕನಿಗೆ ಕಂಡಿದ್ದರಿಂದ ದುರಂತವೊಂದು ತಪ್ಪಿದಂತಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…