ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ನಾಲ್ವರು ಕಾರ್ಮಿಕರು ತೀವ್ರ ಅಸ್ವಸ್ಥಗೊಂಡು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಸುಮಾರು 25 ಮಂದಿ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ, ಅವರ ದೇಹ ಸ್ಥಿತಿ ಸಥಿರವಾಗಿದೆ.
ಆದರೆ ಇವರಲ್ಲಿ ಉತ್ತರ ಭಾರತ ಮೂಲದ ನಾಲ್ವರು ಕಾರ್ಮಿಕರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕಂಪೆನಿಯಲ್ಲಿ 200ಕ್ಕೂ ಅಧಿಕ ಕಾರ್ಮಿಕರಿದ್ದು, ಪಾಳಿಯಲ್ಲಿ ಕೆಲಸ ನಡೆಯುತ್ತಿತ್ತು. ಗುರುವಾರ ಸಂಜೆ 4.30ರ ಸುಮಾರಿಗೆ ಸ್ಥಾವರದ ಒಳಗಿರುವ ಅಮೋನಿಯಾ ಸಾಗಾಟ ಪೈಪ್ ಒಂದರಲ್ಲಿ ಸೋರಿಕೆ ಕಂಡುಬಂತು.
ಘಟಕದ ಸಮೀಪ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಸೋರಿಕೆಯಿಂದ ಉಸಿರುಗಟ್ಟಿದಂತಾಗಿ ಬೊಬ್ಬೆ ಹಾಕಿದ್ದಾರೆ. ತಕ್ಷಣ ಸೈರನ್ ಮೊಳಗಿಸಿ ಕಾರ್ಮಿಕರನ್ನು ಹೊರಗಡೆ ಕರೆದುಕೊಂಡು ಬಂದು ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಯಿತು. ಅಸ್ವಸ್ಥರಾದವರನ್ನು ಕಂಪೆನಿಯ ಆಡಳಿತವು ತುರ್ತಾಗಿ ಚಿಕಿತ್ಸೆಗೆ ದಾಖಲಿಸಲು ಕ್ರಮ ಕೈಗೊಂಡಿತು. ಮಾಹಿತಿ ತಿಳಿಯುತ್ತಿದ್ದಂತೆ ಮಂಗಳೂರು ತಹಶೀಲ್ದಾರ್, ಉಪತಹಶೀಲ್ದಾರ್, ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಅಮೋನಿಯ ಸೋರಿಕೆ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳನ್ನು ಪರಿಶೀಲಿಸಿದ್ದಾರೆ. ಪಣಂಬೂರು ಪೊಲೀಸ್ ಠಾಣೆಯ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…