ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪರ್ಲೋಟ್ ಬಳಿ ಮಾಣಿ ಮೈಸೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಮುಂಬೈ ಮೂಲದ ಕಾರು ಮತ್ತು ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ.
ಕಾರಿನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಪ್ರಯಾಣಿಕರಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮಳೆಯಿಂದಾಗಿ ರಸ್ತೆ ಅಪಘಾತಗಳು ಹೆಚ್ಚುತ್ತಿದ್ದು ಸವಾರರು ಜಾರುವ ರಸ್ತೆಗಳಲ್ಲಿ ನಿಧಾನವಾಗಿ, ಜಾಗರೂಕತೆಯಿಂದ ವಾಹನ ಚಲಾಯಿಸಬೇಕು, ಅತಿವೇಗ ಹಾಗೂ ವಾಹನಗಳನ್ನು ಓವರ್ ಟೇಕ್ ಮಾಡದೆ ವಾಹನ ಚಲಾಯಿಸಬೇಕು ಎಂದು ಹೆದ್ದಾರಿ ಮತ್ತು ಪೊಲೀಸ್ ಅಧಿಕಾರಿಗಳು ಮನವಿ ಮಾಡಿದ್ದಾರೆ.



