ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ: ಸ್ಕೂಟರ್ ಗೆ ಬಸ್ ಡಿಕ್ಕಿ: ಸಹಸವಾರೆ ಪತ್ನಿ ಮೃತ್ಯು, ಪತಿ ಗಂಭೀರ

ಬಸ್ಸೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರೆ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ಸಂಗಮ್ ಜಂಕ್ಷನ್ ಸಮೀಪದ ನವಭಾರತ್ ಟಿಂಬರ್ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತರನ್ನು ಹೊಸಮಠ ಚಾರುಕೊಟ್ಟಿಗೆ ನಿವಾಸಿ ಜಲಜಾ(64) ಎಂದು ಗುರುತಿಸಲಾಗಿದೆ. ಇವರ ಪತಿ ಸ್ಕೂಟರ್ ಸವಾರ ನಾರಾಯಣ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಆನಗಳ್ಳಿಯಿಂದ ಚಾರುಕೊಟ್ಟಿಗೆ ಕಡೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದು, ಆಗ ಹಿಂದಿನಿಂದ ಬಂದ ಬಸ್, ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ನಾರಾಯಣ ಹಾಗೂ ಜಲಜಾ ಇಬ್ಬರೂ ರಸ್ತೆಗೆ ಬಿದ್ದರು. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಜಲಜಾ ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!