ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಣಿಪಾಲ ಪೊಲೀಸ್ ಠಾಣೆಯ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ನಡೆದಿದೆ.
ಬೆಂಗಳೂರು ನೋಂದಣಿಯ ಕಾರು ಮಣಿಪಾಲದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಘಟನೆ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂತಿಗಳು ರಸ್ತೆಗೆ ಬಿದ್ದಿದ್ದು, ಮಣಿಪಾಲದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಕಾರಿನ ಮುಂಭಾಗ ಜಖಂಗೊಂಡಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…