ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ಅವರು (34) ನಿಧನ ಹೊಂದಿದ್ದಾರೆ.
ಇಂದು ಬೆಳಗ್ಗೆ 9.30ರ ಸುಮಾರಿಗೆ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳಲ್ಲಿ ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮತ್ತೆ ಸಂತೋಷ್ ಅವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿದ್ದರು. ಜಾಂಡೀಸ್ ಖಾಯಿಲೆಯಿಂದ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಅವರು ಆ. 5ರಂದು ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇವರು ಕರಿಯಾ-2, ಕೆಂಪ, ಗಣಪ, ಬರ್ಕ್ಲಿ ಹಾಗೂ ಸತ್ಯ ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…