ಇತರೆ

ಡಿ.ಕೆ. ಶಿವಕುಮಾರ್, ರವರ ಭಾಷಣಕ್ಕೆ ಸ್ಪಷ್ಟನೆ ಬೇಕಿದ್ದವರು ಕೆಪಿಸಿಸಿ ಕಚೇರಿಗೆ ಬರಲಿ: ಯೋಗೀಶ್ ಆಚಾರ್ಯ ಇನ್ನಾ

ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿದ್ದ ಕೆಪಿಸಿಸಿ ಅಧ್ಯಕ್ಷರು, ರಾಜ್ಯ ಸರ್ಕಾರದ ಉಪ ಮುಖ್ಯಮಂತ್ರಿ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಮಾತನಾಡುತ್ತಾ ಪರಶುರಾಮ ಪ್ರತಿಮೆ ನಿರ್ಮಾಣದಲ್ಲಿ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರು ಜನತೆಗೆ ಎಸಗಿದ ದ್ರೋಹವನ್ನು ಉಲ್ಲೇಖಿಸಿದ್ದರು, ಮತ್ತು ಈ ವಿಚಾರವಾಗಿ ಕಾಂಗ್ರೆಸ್ ಪಕ್ಷ ಸಮರ್ಥವಾಗಿ ಹೋರಾಟ ನಡೆಸಬೇಕು ಎಂದು ಬಹಿರಂಗ ಸಭೆಯಲ್ಲಿ ಕರೆ ನೀಡಿದ್ದರು.

ಡಿ.ಕೆ. ಶಿವಕುಮಾರ್ ಅವರ ಮಾತಿನಿಂದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಯಾಗಿದ್ದು ನಕಲಿ ಪರಶುರಾಮ ಪ್ರತಿಮೆ ಹಗರಣದ ವಿಚಾರದಲ್ಲಿ ತೀವ್ರ ಹೋರಾಟವನ್ನು ನಡೆಸುತ್ತಾ ಬಂದಿದ್ದೆವು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾತಿನಿಂದ ಕಂಗಾಲಾಗಿದ್ದ ಕಾರ್ಕಳ ಶಾಸಕ ಸುನೀಲ್ ಕುಮಾರ್ ಮತ್ತವರ ಹಿಂಬಾಲಕರು ಡಿ.ಕೆ.ಶಿವಕುಮಾರ್ ಭಾಷಣದ ವಿರುದ್ದ ಮುಗಿಬಿದ್ದು ಟೀಕೆ ಮಾಡಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಟೀಕೆಗಳಿಗೆ ಕಾರ್ಕಳ ಕಾಂಗ್ರೆಸ್ ನಾಯಕರು ಸಮರ್ಥವಾಗಿ ಪ್ರತ್ಯುತ್ತರ ನೀಡಿ ತಮ್ಮ ನಾಯಕನ ಮಾತನ್ನು ಸಮರ್ಥನೆ ಮಾಡಿದ್ದರು. ಆದರೆ ಯುವ ಕಾಂಗ್ರೆಸ್ ಉಡುಪಿ ಜಿಲ್ಲಾದ್ಯಕ್ಷರಾಗಿರುವ ಕೃಷ್ಣ ಶೆಟ್ಟಿ ಬಜಗೋಳಿ ಅವರು ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ಸ್ಥಳೀಯ ನಾಯಕರು ಸ್ಪಷ್ಟನೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಭಾಷಣದ ವಿರುದ್ದವೇ ಈಗ ಬಹಿರಂಗ ಹೇಳಿಕೆ ನೀಡಿರುವುದು ಪಕ್ಷದ ಶಿಸ್ತನ್ನು ಉಲ್ಲಂಘಿಸಿದಂತಾಗಿದೆ ಮತ್ತು ಕೃಷ್ಣ ಶೆಟ್ಟಿ ಬಜಗೋಳಿ ಅವರ ಹೇಳಿಕೆಗೂ ಕಾರ್ಕಳದ ಬಿಜೆಪಿ ನಾಯಕರ ಹೇಳಿಕೆಗೂ ಯಾವುದೇ ವ್ಯತ್ಯಾಸ ಇಲ್ಲದಂತಾಗಿದೆ. ಸಣ್ಣ ವಯಸ್ಸಿನಲ್ಲಿಯೇ ಯುವ ಕಾಂಗ್ರೆಸ್ ಸಂಘಟನೆಯಲ್ಲಿ ಕಾರ್ಯ ನಿರ್ವಹಿಸಿ, ರಾಜ್ಯದ ಪ್ರಭಾವಿ ಸಚಿವರಾಗಿ, ಪ್ರಸ್ತುತ ಕೆಪಿಸಿಸಿ ಅಧ್ಯಕ್ಷರಾಗಿ ರಾಜ್ಯದ ಉಪಮುಖ್ಯಮಂತ್ರಿ ಹುದ್ದೆಗೇರಿದ ದೇಶದ ಪ್ರಭಾವಿ ಕಾಂಗ್ರೆಸ್ ನಾಯಕರಲ್ಲಿ ಒಬ್ಬರಾಗಿರುವ ಡಿ.ಕೆ. ಶಿವಕುಮಾರ್ ಅವರ ಜೀವನವು ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನಿಗೆ ಪ್ರೇರಣೆಯಾಗಿರುತ್ತದೆ. ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಲು ಇಂದಿಗೂ ಶ್ರಮಿಸುತ್ತಿರುವ ಡಿ.ಕೆ. ಶಿವಕುಮಾರ್ ಅವರ ಭಾಷಣದ ಸ್ಪಷ್ಟತೆಯನ್ನು ನಮ್ಮ ನೆಚ್ಚಿನ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ನೀಡಬೇಕೆಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರು ನೀಡಿರುವ ಹೇಳಿಕೆಯು ಕಾಂಗ್ರೆಸ್ ಪಕ್ಷಕ್ಕೆ ಸಾರ್ವಜನಿಕವಾಗಿ ಮುಜುಗರ ಅನುಭವಿಸುವಂತಾಗಿದೆ, ಮತ್ತು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಪಕ್ಷ ನಿಷ್ಠೆಯು ಅನುಮಾನ ಮೂಡಿಸುವಂತಿದೆ. ಡಿ.ಕೆ. ಶಿವಕುಮಾರ್ ಅವರ ಭಾಷಣವನ್ನು ಉದಯ ಶೆಟ್ಟಿ ಮುನಿಯಾಲು ಮಾತ್ರವಲ್ಲ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನು ಸಮರ್ಥನೆ ಮಾಡುತ್ತಾನೆ ಮತ್ತು ಸ್ಪಷ್ಟನೆಯನ್ನು ನೀಡಲು ಈಗಲೂ ಸಿದ್ದವಾಗಿದ್ದಾನೆ ಎನ್ನುವುದನ್ನು ಕೃಷ್ಣ ಶೆಟ್ಟಿ ಬಜಗೋಳಿಯವರು ಅರ್ಥ ಮಾಡಿಕೊಳ್ಳಬೇಕು. ಕೆಪಿಸಿಸಿ ಅಧ್ಯಕ್ಷರು ಮಾನ್ಯ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ದ ಹೇಳಿಕೆ ನೀಡಿ ಪಕ್ಷದಲ್ಲಿ ಅಶಿಸ್ತಿಗೆ ಕಾರಣವಾದ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷನ ವಿರುದ್ದ ಪಕ್ಷದ ನಾಯಕರು ಈ ಕೂಡಲೆ ಕ್ರಮ ಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯೋಗೀಶ್ ಆಚಾರ್ಯ ಇನ್ನಾ ಮಾದ್ಯಮದ ಮೂಲಕ ಆಗ್ರಹಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಎ.16ರಂದು ಅಬ್ಬಾಸ್…

1 day ago

ಮಂಗಳೂರು: ಖಾಸಗಿ ಬಸ್- ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ..!

ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರು ಗಾಯಗೊಂಡ…

1 day ago

ಚಿಕ್ಕಬಳ್ಳಾಪುರ: ಹಣ ಮತ್ತು ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ…!

ಹಣ ಮತ್ತು ಚಿನ್ನಾಭರಣಕ್ಕಾಗಿ ತನ್ನದೇ ಚಿಕ್ಕಮ್ಮನನ್ನು ಕೊಲೆ ಮಾಡಿ, ಶವ ಸುಟ್ಟು ಹಾಕಿದ್ದ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದ್ದು,…

1 day ago

ವಿಶಾಖಪಟ್ಟಣ: ಪಾರ್ಟಿಗೆ ತೆರಳಿದ್ದ ಯುವತಿ ಲಾಡ್ಜ್ ನಲ್ಲಿ ಶ*ವವಾಗಿ ಪತ್ತೆ..!

ಸ್ನೇಹಿತರೊಂದಿಗೆ ಪಾರ್ಟಿಗೆ ತೆರಳಿದ್ದ ಯುವತಿಯೊಬ್ಬಳು ಮರುದಿನ ಲಾಡ್ಜ್ ವೊಂದರಲ್ಲಿ ಶ*ವವಾಗಿ ಪತ್ತೆಯಾಗಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ…

1 day ago

ಮಂಗಳೂರು: ಎ.20ರಂದು ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ….!

ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ…

1 day ago

ಮಂಗಳೂರು: ಶಕ್ತಿನಗರದ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ..!

ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ ಶಾಲೆಯ ಮುಂಭಾಗದಲ್ಲಿ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದನ್ನು ಶಕ್ತಿ ವಿದ್ಯಾಸಂಸ್ಥೆಯ ಸಿಬ್ಬಂದಿಗಳು…

1 day ago