ಬೈಕಿನ ಸೈಡ್ ಬಾಕ್ಸ್ನಿಂದ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಅಂತರ್ ರಾಜ್ಯ ಕಳ್ಳನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಬಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ 39ವರ್ಷದ ಸಂತೋಷ್ ಹನುಮಂತ ಕಟ್ಟಿಮನಿ ಬಂಧಿತ ಆರೋಪಿಯಾಗಿದ್ದಾರೆ. ಈತನಿಂದ ಕಳವು ಮಾಡಿದ 32,000 ರೂಪಾಯಿ ನಗದು ಹಾಗೂ ಮೊಬೈಲ್‌ನ್ನು ವಶಪಡಿಸಕೊಳ್ಳಲಾಗಿದೆ. ಸೊಸೈಟಿಯೊಂದರ ಪಿಗ್ಮಿ ಸಂಗ್ರಹಕರು ಆ.4ರಂದು ಸಂಜೆ ಬ್ರಹ್ಮಾವರ ಶಿವಳ್ಳಿ ಹೋಟೆಲ್ ಎದುರುಗಡೆ ಕರ್ನಾಟಕ ಬ್ಯಾಂಕ್ ಎಟಿಎಮ್ ಬಳಿ ಪಿಗ್ಮಿ ಕಲೆಕ್ಷನ್ ಮಾಡಿದ ನಗದನ್ನು ಬೈಕ್ ನ ಸೈಡ್ ಬಾಕ್ಸ್ನಲ್ಲಿ ಇಟ್ಟು ಬೀಗ ಹಾಕಿ ಹೋಟೆಲ್‌ಗೆ ಹೋಗಿ ಪಿಗ್ಮಿ ಕಲೆಕ್ಷನ್ ಮಾಡುತ್ತಿದ್ರು.
ಬಳಿಕ ವಾಪಾಸು ಬಂದು ನೋಡಿದಾಗ ಬೈಕ್‌ನ ಬಾಕ್ಸ್ನಲ್ಲಿ ಇಟ್ಟ ನಗದು ಹಣವು ಕಾಣದೇ ಇದ್ದು ಪರಿಶೀಲಿಸಿದಾಗ ಬಾಕ್ಸ್ನ ಬೀಗ ಒಡೆದು ಬಾಕ್ಸ್ನಲ್ಲಿದ್ದ ನಗದು ಹಣವನ್ನು ಮತ್ತು ಪಾನ್ ಕಾರ್ಡ್, ಆಧಾರ್ ಕಾರ್ಡ್ ಇತರೆ ದಾಖಲೆ ಪತ್ರವನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ಕಂಡುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…