ಕಾರೊಂದು ಡಿಕ್ಕಿಯಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ.
ಕುಡ್ತಮುಗೇರಿನ ಪ್ರಗತಿ ಸ್ವೀಟ್ಸ್ನ ಮಾಲಿಕ ಜಗನ್ನಾಥ ಶೆಟ್ಟಿಗಾರ್ ಗಂಭೀರ ಗಾಯಗೊಂಡವರಾಗಿದ್ದಾರೆ. ಜಗನ್ನಾಥ ಶೆಟ್ಟಿಗಾರ್ ರವರು ಕುಡ್ತಮುಗೇರಿನಿಂದ ಪರ್ತಿಪ್ಪಾಡಿ ಕಡೆಗೆ ತೆರಳುತ್ತಿದ್ದ ವೇಳೆ ದಾರಿ ಮಧ್ಯೆ ಅವರ ದ್ವಿಚಕ್ರವಾಹನದ ಟಯರ್ ಪಂಚರ್ ಆಗಿತ್ತು. ಆದ್ದರಿಂದ ಅವರು ತಮ್ಮ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಅಲ್ಲೆ ಪಕ್ಕದಲ್ಲಿ ನಿಂತಿದ್ದ ವೇಳೆ ಪುತ್ತೂರು ಭಾಗದಿಂದ ಸಾಲೆತ್ತೂರು ಕಡೆ ತೆರಳುತ್ತಿದ್ದ ಪುತ್ತೂರು ಮೂಲದವರಿದ್ದ, ಕಾರೊಂದು ಅವರಿಗೆ ಡಿಕ್ಕಿಯಾಗಿದೆ. ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಜಗನ್ನಾಥ ಶೆಟ್ಟಿಗಾರ್ ರವರನ್ನು ಕೂಡಲೇ ಸ್ಥಳೀಯರು ದೇರಳಕಟ್ಟೆ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…