ಬೀದಿ ನಾಯಿಯನ್ನು ರಕ್ಷಿಸಲು ಹೋಗಿ ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಸ್ಕೂಟಿಯಲ್ಲಿದ್ದ ಮೂವರು ಶಾಲಾ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದಿದೆ. ರಾಂಪುರ ನಗರದ ದೆಹಲಿ-ನೈನಿತಾಲ್ ರಾಷ್ಟ್ರೀಯ ಹೆದ್ದಾರಿ-87ರಲ್ಲಿ ಸೋಮವಾರ ಈ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ಸೈಯದ್ ಜಯಾನ್, ಮೊಹಮ್ಮದ್ ಅಹದ್ ಮತ್ತು ಮೊಹಮ್ಮದ್ ಉಮೈರ್ ಎಂದು ಗುರುತಿಸಲಾಗಿದೆ.
ತಲೆಗೆ ತೀವ್ರವಾದ ಪೆಟ್ಟು ಬಿದ್ದು ಅತಿಯಾದ ರಕ್ತಸ್ರಾವದಿಂದ ಮೂವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಈ ನಿಟ್ಟಿನಲ್ಲಿ ರಾಮ್‌ಪುರ ಎಎಸ್‌ಪಿ ಸಂಸಾರ್ ಸಿಂಗ್ ಅವರು ತಮ್ಮ ಮಕ್ಕಳಿಗೆ ವಾಹನಗಳನ್ನು ನೀಡುವಾಗ ಪೋಷಕರು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಇಂತಹ ಘಟನೆಗಳು ನಡೆಯುತ್ತವೆ ಎಂದು ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದರು.



