ಜನ ಮನದ ನಾಡಿ ಮಿಡಿತ

Advertisement

ನಾಯಿ ರಕ್ಷಿಸಲು ಹೋಗಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಸ್ಕೂಟಿ​.. ಮೂವರು ವಿದ್ಯಾರ್ಥಿಗಳು ಸಾವು

ಬೀದಿ ನಾಯಿಯನ್ನು ರಕ್ಷಿಸಲು ಹೋಗಿ ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಸ್ಕೂಟಿಯಲ್ಲಿದ್ದ ಮೂವರು ಶಾಲಾ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದಿದೆ. ರಾಂಪುರ ನಗರದ ದೆಹಲಿ-ನೈನಿತಾಲ್ ರಾಷ್ಟ್ರೀಯ ಹೆದ್ದಾರಿ-87ರಲ್ಲಿ ಸೋಮವಾರ ಈ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ಸೈಯದ್ ಜಯಾನ್, ಮೊಹಮ್ಮದ್ ಅಹದ್ ಮತ್ತು ಮೊಹಮ್ಮದ್ ಉಮೈರ್ ಎಂದು ಗುರುತಿಸಲಾಗಿದೆ.

ತಲೆಗೆ ತೀವ್ರವಾದ ಪೆಟ್ಟು ಬಿದ್ದು ಅತಿಯಾದ ರಕ್ತಸ್ರಾವದಿಂದ ಮೂವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಈ ನಿಟ್ಟಿನಲ್ಲಿ ರಾಮ್‌ಪುರ ಎಎಸ್‌ಪಿ ಸಂಸಾರ್ ಸಿಂಗ್ ಅವರು ತಮ್ಮ ಮಕ್ಕಳಿಗೆ ವಾಹನಗಳನ್ನು ನೀಡುವಾಗ ಪೋಷಕರು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಇಂತಹ ಘಟನೆಗಳು ನಡೆಯುತ್ತವೆ ಎಂದು ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!