ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ದೇವಿನಗರದ ಹಿಂದೂ ರುದ್ರಭೂಮಿಯಲ್ಲಿ ಕಳ್ಳತನ; ಜಾಗೃತೆ ವಹಿಸಿ

ಮನೆ, ದೇವಸ್ಥಾನ, ಅಂಗಡಿ ಹೀಗೆ ಬೇರೆ ಬೇರೆ ವಾಣಿಜ್ಯ ಕೇಂದ್ರಗಳಲ್ಲಿ ಕಳ್ಳತನ ನಡೆಯುವುದು ಕೇಳಿದ್ದೇವೆ.

ಆದರೆ ಇದೀಗ ರುದ್ರಭೂಮಿಯನ್ನು ಬಿಡದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ ಬಗ್ಗೆ ಅಮ್ಟಾಡಿ ಗ್ರಾ.ಪಂ.ಅಧ್ಯಕ್ಷ ವಿಜಯ್ ಅವರು ಮಾಹಿತಿ ನೀಡಿದ್ದಾರೆ. ಅಮ್ಟಾಡಿ ಗ್ರಾಮದ ದೇವಿನಗರ ಎಂಬಲ್ಲಿರುವ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಹೆಣ ಸುಡುವ ಸಿಲಿಕಾನ್ ಚೇಂಬರ್, ಹಿತ್ತಾಳೆಯ ನೀರಿನ ನಲ್ಲಿ, ಕಬ್ಬಿಣದ ಏಣಿ, ಕಬ್ಬಿಣದ ಗೇಟ್ ಹಾಗೂ ಇನ್ನಿತರ ಸುಮಾರು 4ಲಕ್ಷ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ.

ಅಗಸ್ಟ್ 11ರಂದು ಸ್ಥಳೀಯ ನಿವಾಸಿ ಐತ್ತಪ್ಪ ಪೂಜಾರಿ ಎಂಬವರ ಮೃತದೇಹದ ದಹನ ಮಾಡಲು ರುದ್ರಭೂಮಿಗೆ ತೆರಳಿದಾಗ ಕಳವು ಮಾಡಿದ ಬಗ್ಗೆ ಬೆಳಕಿಗೆ ಬಂದಿದೆ. ಕಳ್ಳತನ ಪ್ರಕರಣದ ಕುರಿತು ಅಮ್ಟಾಡಿ ಗ್ರಾಮ ಪಂಚಾಯತ್‌ನ ವತಿಯಿಂದ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡುವ ಕುರಿತು ಮಾತಾನಾಡಿದ್ದಾರೆ. ಅಮ್ಟಾಡಿ ಗ್ರಾಮದಲ್ಲಿ ಕೆಲವು ದಿನಗಳಿಂದ ಕಳ್ಳರ ಹಾವಳಿ ಕಂಡು ಬಂದಿದ್ದು, ಮನೆಯ ಹೊರಗಡೆ ನಿಲ್ಲಿಸಿರುವ ವಾಹನಗಳ ಸಹಿತ ಬೆಲೆ ಬಾಳುವ ವಸ್ತುಗಳ ಬಗ್ಗೆ ನಿಗಾ ವಹಿಸಿ ಜಾಗೃತೆಯಿಂದ ಇರುವಂತೆ ವಿಜಯ್ ಅವರು ಗ್ರಾಮಸ್ಥರಲ್ಲಿ ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!