ಮನೆ, ದೇವಸ್ಥಾನ, ಅಂಗಡಿ ಹೀಗೆ ಬೇರೆ ಬೇರೆ ವಾಣಿಜ್ಯ ಕೇಂದ್ರಗಳಲ್ಲಿ ಕಳ್ಳತನ ನಡೆಯುವುದು ಕೇಳಿದ್ದೇವೆ.
ಆದರೆ ಇದೀಗ ರುದ್ರಭೂಮಿಯನ್ನು ಬಿಡದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ ಬಗ್ಗೆ ಅಮ್ಟಾಡಿ ಗ್ರಾ.ಪಂ.ಅಧ್ಯಕ್ಷ ವಿಜಯ್ ಅವರು ಮಾಹಿತಿ ನೀಡಿದ್ದಾರೆ. ಅಮ್ಟಾಡಿ ಗ್ರಾಮದ ದೇವಿನಗರ ಎಂಬಲ್ಲಿರುವ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಹೆಣ ಸುಡುವ ಸಿಲಿಕಾನ್ ಚೇಂಬರ್, ಹಿತ್ತಾಳೆಯ ನೀರಿನ ನಲ್ಲಿ, ಕಬ್ಬಿಣದ ಏಣಿ, ಕಬ್ಬಿಣದ ಗೇಟ್ ಹಾಗೂ ಇನ್ನಿತರ ಸುಮಾರು 4ಲಕ್ಷ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ.
ಅಗಸ್ಟ್ 11ರಂದು ಸ್ಥಳೀಯ ನಿವಾಸಿ ಐತ್ತಪ್ಪ ಪೂಜಾರಿ ಎಂಬವರ ಮೃತದೇಹದ ದಹನ ಮಾಡಲು ರುದ್ರಭೂಮಿಗೆ ತೆರಳಿದಾಗ ಕಳವು ಮಾಡಿದ ಬಗ್ಗೆ ಬೆಳಕಿಗೆ ಬಂದಿದೆ. ಕಳ್ಳತನ ಪ್ರಕರಣದ ಕುರಿತು ಅಮ್ಟಾಡಿ ಗ್ರಾಮ ಪಂಚಾಯತ್‌ನ ವತಿಯಿಂದ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡುವ ಕುರಿತು ಮಾತಾನಾಡಿದ್ದಾರೆ. ಅಮ್ಟಾಡಿ ಗ್ರಾಮದಲ್ಲಿ ಕೆಲವು ದಿನಗಳಿಂದ ಕಳ್ಳರ ಹಾವಳಿ ಕಂಡು ಬಂದಿದ್ದು, ಮನೆಯ ಹೊರಗಡೆ ನಿಲ್ಲಿಸಿರುವ ವಾಹನಗಳ ಸಹಿತ ಬೆಲೆ ಬಾಳುವ ವಸ್ತುಗಳ ಬಗ್ಗೆ ನಿಗಾ ವಹಿಸಿ ಜಾಗೃತೆಯಿಂದ ಇರುವಂತೆ ವಿಜಯ್ ಅವರು ಗ್ರಾಮಸ್ಥರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…