ಅಡ್ಯಾರು: ಕಾಲೇಜು ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಿರ್ವಾಹಕ ಕರ್ತವ್ಯದಲ್ಲಿದ್ದಾಗಲೇ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಅಡ್ಯಾರ್ ಸಮೀಪ ಇಂದು ಬೆಳಗ್ಗಿನ ವೇಳೆ ಸಂಭವಿಸಿದೆ.
ಕುತ್ತಾರು ನಿವಾಸಿ ಸಂತೋಷ್ (40) ಮೃತರು. ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯಕ್ಕೆ ಸೇರಿದ ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಬೆಳಗ್ಗಿನ ವೇಳೆ ಶಾಲಾ ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರಲು ತೆರಳುವ ಟ್ರಿಪ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಘಟನೆ ನಡೆದಿದೆ. ಬಸ್ಸೊಳಗಡೆ ಶಾಲಾ ವಿದ್ಯಾರ್ಥಿಗಳನ್ನು ಹತ್ತಿಸುವ ಸಂದರ್ಭದಲ್ಲಿ ಏಕಾಏಕಿ ಕುಸಿದುಬಿದ್ದಿದ್ದಾರೆ. ತಕ್ಷಣ ಸ್ಥಳೀಯರು ಸೇರಿಕೊಂಡು ಆಸ್ಪತ್ರೆ ಸೇರಿಸುವ ಪ್ರಯತ್ನ ಮಾಡಿದರಾದರೂ, ದಾರಿಮಧ್ಯೆ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಮೃತರು ಹಲವು ವರ್ಷಗಳಿಂದ ನಿಟ್ಟೆ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರು. ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ. ನಿಟ್ಟೆ ಸಂಸ್ಥೆ ಹಲವು ವರ್ಷಗಳಿಂದ ಸರಕಾರಿ ಶಾಲೆ, ಆಶ್ರಮಗಳಿಂದ ಕಲಿಯುವ ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರುವ ಪ್ರಯತ್ನವನ್ನು ಹಲವು ವರ್ಷಗಳಿಂದ ಮಾಡುತ್ತಾ ಬಂದಿದ್ದಾರೆ. ಇದೇ ಟ್ರಿಪ್ ನಲ್ಲಿ ಸಂತೋಷ್ ಕರ್ತವ್ಯ ನಿರ್ವಹಿಸುತ್ತಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…