ಜನ ಮನದ ನಾಡಿ ಮಿಡಿತ

Advertisement

ಅಜ್ಜ-ಅಜ್ಜಿಯನ್ನು ಕೊಲೆ ಮಾಡಿ ಚಿನ್ನ ದೋಚಿ ಬಂದವ ಮಂಗಳೂರಲ್ಲಿ ಪೊಲೀಸರ ಬಲೆಗೆ…

ತಂದೆ ತಾಯಿಗಿಂದ ಹೆಚ್ಚಿನ ತನ್ನ ಸ್ವಂತ ಅಜ್ಜ ಅಜ್ಜಿಯನ್ನೇ ಕೊಲೆ ಮಾಡಿ, ತದನಂತರ ಚಿನ್ನಾಭರಣಗಳನ್ನು ದೋಚಿದವ ಮಂಗಳೂರು ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ. ಕೇರಳದಲ್ಲಿ ಅಜ್ಜ ಅಜ್ಜಿಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿ ಬಂದಿದ್ದ ಯುವಕನನ್ನು ಮಂಗಳೂರು ಪೊಲೀಸ ಬಂಧಿಸಿದ್ದಾರೆ. ಬಂಧಿತನನ್ನು ಕೇರಳ ರಾಜ್ಯದ ತಿಶೂರ್ ಜಿಲ್ಲೆಯ 27 ವರ್ಷದ ಅಹ್ಮದ್ ಅಕ್ಕಲ್ ಎಂದು ಗುರುತಿಸಲಾಗಿದೆ.

ಜುಲೈ 24ರಂದು ಬೆಳಗ್ಗೆ ಮಂಗಳೂರು ಉತ್ತರ ಠಾಣೆಗೆ ಬಂದ ಮಾಹಿತಿಯಂತೆ ಮಂಗಳೂರು ಕಾರ್ ಸ್ಟ್ರೀಟ್ ಪರಿಸರದಲ್ಲಿ ಅನುಮಾನಸ್ಪದ ಯುವಕನೊಬ್ಬ ಚಿನ್ನಾಭರಣಗಳನ್ನು ಮಾರಾಟ ಮಾಡಲು ಬಂದಿದ್ದಾನೆ ಎಂಬ ಮಾಹಿತಿ ಬಂದಿತ್ತು. ಕೂಡಲೇ ಪೊಲೀಸರು ಮಂಗಳೂರು ಕಾರ್ ಸ್ಟೀಟ್ ಗೆ ತೆರಳಿ ಯುವಕನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೊಲೆ ಕೇಸ್ ಬಯಲಾಗಿದೆ. ಆರೋಪಿ ಅಹಮ್ಮದ್ ಅಕ್ಕಲ್ ಜುಲೈ 23ರಂದು ರಾತ್ರಿ ತನ್ನ ಅಜ್ಜ ಮತ್ತು ಅಜ್ಜಿಯನ್ನು ಕೊಲೆ ಮಾಡಿ, ಅವರ ಚಿನ್ನಾಭರಣಗಳನ್ನು ದೋಚಿ ಬಂದಿರುವುದಾಗಿ ಒಪ್ಪಿಕೊಂಡಿದ್ದಾನೆ. ಆತನ ಬಳಿ ಮುತ್ತಿನ ಎರಡು ಎಳೆಯ ಬಂಗಾರದ ಸರ, ಸಣ್ಣ ಪದಕವಿರುವ ಒಂದು ಸರ, ಕಿವಿಯೊಲೆ ಮೂರು ಜೊತೆ, ಐದು ಉಂಗುರ, ಎರಡು ಕೈಬಳೆ, ಪಾಸ್ ಪೋರ್ಟ್ ಹಾಗೂ ಇತರ ದಾಖಲಾತಿಗಳು ಇದ್ದು ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!