ಹೊಸದಾಗಿ ನಿರ್ಮಿತವಾಗಿ ಸಂಚಾರಕ್ಕೆ ಮುಕ್ತವಾಗಿರುವ ಕಲ್ಲಡ್ಕ ಮೇಲ್ಸತುವೆಯಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಇನ್ನೊಂದು ಲಾರಿ ಡಿಕ್ಕಿ ಹೊಡೆದ ಘಟನೆ ಇಂದು ಬೆಳ್ಳಂಬೆಳ್ಳಗೆ ನಡೆದಿದೆ.
ಚಾಲಕ ಉಪ್ಪಿನಂಗಡಿ ನಿವಾಸಿ ಖಲೀಲ್ ಎಂಬಾತ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದು, ಆತನನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ಕಂಪೆನಿಯೊಂದರ ಐಸ್‌ಕ್ರೀಮ್ ಸಾಗಿಸುವ ಪ್ರೀಝರ್ ವಾಹನ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಲಾರಿ ಸಂಪೂರ್ಣ ಜಖಂಗೊಂಡಿದೆ. ಕಳೆದ ಎರಡು ದಿನಗಳಿಂದ ಲಾರಿಯೊಂದು ಕಲ್ಲಡ್ಕ ಪ್ಲೈ ಓವರ್ ಮೇಲೆ ಕೆಟ್ಟು ನಿಂತಿದ್ದು, ಲಾರಿ ಚಾಲಕನಿಗೆ ಮುಂಜಾನೆ ವೇಳೆ ಕಣ್ಣಿಗೆ ಕಾಣದೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಹೊಸ ಪ್ಲೈ ಓವರ್‌ನಲ್ಲಿ ಇನ್ನು ಕೂಡ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಬೀದಿ ದೀಪಗಳನ್ನ ಆಳವಡಿಸಲಾಗಿಲ್ಲ. ಜೊತೆಗೆ ಕೆಟ್ಟು ನಿಂತ ಲಾರಿಗೆ ಯಾವುದೇ ಸೂಚನ ಫಲಕ ಕೂಡ ಅಳವಡಿಸಿರಲಿಲ್ಲ ಎಂಬ ಆರೋಪ ಕೂಡ ಕೇಳಿ ಬಂದಿವೆ. ಇನ್ನು ಘಟನಾ ಸ್ಥಳಕ್ಕೆ ಟ್ರಾಫಿಕ್ ಪೋಲೀಸರು ಬೇಟಿ ನೀಡಿದ್ದಾರೆ.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…