ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ಕೆಂಪುಕಲ್ಲು ಹಾಗೂ ಮರಳಿನ ತೀವ್ರ ಸಮಸ್ಯೆ ಬಗ್ಗೆ ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್‌ರವರು ಸರ್ಕಾರದ ಗಮನ ಸೆಳೆದಿದ್ದಾರೆ.
ಬಿಜೆಪಿ ಹಿರಿಯ ಶಾಸಕ ಸುನಿಲ್ ಕುಮಾರ್ ಅವರ ಮಾತಿಗೆ ಧ್ವನಿಗೂಡಿಸಿದ ಶಾಸಕರು, ಗಣಿ ಇಲಾಖೆಯ ಅಧಿಕಾರಿಗಳು ಮಂಗಳೂರಿನ ವಸ್ತುಸ್ಥಿತಿ ಅರಿಯದೇ ಬೆಂಗಳೂರಿನಲ್ಲಿ ಕೂತು ಕಾನೂನು ರೂಪಿಸಿದರೆ ಇನ್ನಷ್ಟು ಗೊಂದಲಗಳೇ ಹೆಚ್ಚುವುದಲ್ಲದೇ ಪರಿಹಾರ ಸಿಗುವುದಿಲ್ಲ. ಎಲ್ಲಾ ಅಧಿಕಾರಿಗಳು ಮಂಗಳೂರಿಗೆ ಬಂದು ವಾಸ್ತವ ಅಂಶಗಳನ್ನು ತಿಳಿದುಕೊಂಡು ನೀತಿ ನಿಯಮ ರೂಪಿಸುವಂತಾಗಲಿ. ಜನಪ್ರತಿನಿಧಿಗಳಾದ ನಮ್ಮನ್ನು ಆಹ್ವಾನಿಸದೇ ಈ ಬಗ್ಗೆ ಎರಡು ಮೂರು ಸಭೆಗಳನ್ನು ನಡೆಸಲಾಗಿದೆ. ಜಿಲ್ಲೆಯಲ್ಲಿ ಎಲ್ಲಾ ಕಟ್ಟಡ ಕಾಮಗಾರಿಗಳು ಸ್ಥಗಿತಗೊಂಡಿದ್ದು, ಅದಕ್ಕೆ ಪೂರಕವಾಗಿ ಹೊಂದಿಕೊಂಡಂತಹ ಆರ್ಥಿಕ ವ್ಯವಸ್ಥೆಯೂ ಹದಗೆಟ್ಟಿದೆ. ಕೂಲಿ ಕಾರ್ಮಿಕರ ಸ್ಥಿತಿಯಂತೂ ಹೇಳತೀರದಾಗಿದೆ. ದಯವಿಟ್ಟು ಕೂಡಲೇ ಈ ಬಗ್ಗೆ ಸೂಕ್ತ ಕ್ರಮಕೈಗೊಂಡು ನಮ್ಮ ಜಿಲ್ಲೆಯ ಜನತೆಗೆ ಅನುಕೂಲ ಮಾಡಿಕೊಡಿ ಎಂದು ಶಾಸಕರು ಆಗ್ರಹಿಸಿದ್ರು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…