ಜನ ಮನದ ನಾಡಿ ಮಿಡಿತ

Advertisement

ಸೋಮೇಶ್ವರ: ಸೋಮೇಶ್ವರದಲ್ಲಿ ಮನೆಯ ಆವರಣ ಗೋಡೆಗೆ ಸ್ಕೂಟರ್ ಢಿಕ್ಕಿ…!

ಸ್ಕಿಡ್ ಆಗಿ ನಿಯಂತ್ರಣ ತಪ್ಪಿದ ಸ್ಕೂಟರೊಂದು ರಸ್ತೆ ಬದಿಯ ಮನೆಯ ಆವರಣ ಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಅಂಬಿಕಾ ರಸ್ತೆ ಎಂಬಲ್ಲಿ ನಡೆದಿದೆ.

ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮೀ ಮಂದಿರ ಬಳಿಯ ನಿವಾಸಿ 44ವರ್ಷದ ರಾಘವೇಂದ್ರ ಸಾಲ್ಯಾನ್ ಯಾನೆ ರಘು ಮೃತ ದುರ್ದೈವಿಯಾಗಿದ್ದಾರೆ. ಖಾಸಗಿ ಕಂಪನಿಯೊಂದರಲ್ಲಿ ಇಲೆಕ್ಟ್ರಿಕಲ್ ಗುತ್ತಿಗೆದಾರರಾಗಿದ್ದ ರಾಘವೇಂದ್ರ ಅವರು ಮಂಗಳವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಅಂಬಿಕಾ ರಸ್ತೆಯ ನಿರ್ಮಲಾ ಟ್ರಾವೆಲ್ಸ್ ಗ್ಯಾರೇಜ್ ಬಳಿ ರಸ್ತೆ ಅಪಘಾತ ನಡೆದಿದೆ.

 

ಅಂಬುಲೆನ್ಸ್ ತುರ್ತು ವಾಹನವು ಸ್ಥಳಕ್ಕೆ ಬರಲು ತಡವಾದ ಕಾರಣ ಸ್ಥಳೀಯ ಯುವಕರು ಆಟೋ ರಿಕ್ಷಾದಲ್ಲಿ ಗಾಯಾಳು ರಾಘವೇಂದ್ರ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ದಾರಿ ಮಧ್ಯದಲ್ಲೇ ಮೃತಪಟ್ಟಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಮೃತ ರಾಘವೇಂದ್ರ ಅವರು ತಾಯಿ,ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!