ಹೊಸ ಮನೆ ನಿರ್ಮಾಣಕ್ಕೆ ವಿದ್ಯುತ್ ಸಂಪರ್ಕದ ಓ.ಸಿ ಬಿಸಿ ತಟ್ಟುತ್ತಿದ್ದು, ಸಾರ್ವಜನಿಕರ ಅನುಕೂಲಕ್ಕೆ ತಕ್ಕಂತೆ ವಿದ್ಯುತ್ ಸಂಪರ್ಕಕ್ಕೆ ನಿಯಮ ಸಡಿಲೀಕರಣಗೊಳಿಸುವಂತೆ ವಿಧಾನ ಪರಿಷತ್ನಲ್ಲಿ ಡಾ.ಧನಂಜಯ ಸರ್ಜಿ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

ರಾಜ್ಯದಲ್ಲಿ ಹೊಸ ವಿದ್ಯುತ್ ಸಂಪರ್ಕಗಳಿಗೆ ಸ್ವಾಧೀನಾನುಭವ ಪತ್ರ ಕಡ್ಡಾಯಗೊಳಿಸಿರುವುದರಿಂದ, ಕಟ್ಟಡ ನಿರ್ಮಾಣ ಹಾಗೂ ಕೈಗಾರಿಕೋದ್ಯಮಕ್ಕೆ ಹೊಸ ಸಮಸ್ಯೆ ಶುರುವಾಗಿದೆ. ವಿದ್ಯುತ್ ವಿತರಣಾ ಕಂಪನಿಗಳು ವಿದ್ಯುತ್ ಸಂಪರ್ಕ ನೀಡುವುದಕ್ಕೆ ನಿರಾಕರಿಸುತ್ತಿದ್ದು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಆದೇಶವು ಕಟ್ಟಡ ಮಾಲಿಕರ ಜೊತೆಗೆ ಇಂಧನ ಇಲಾಖೆಗೂ ಸಂಕಷ್ಟ ತಂದೊಡ್ಡಿದೆ. ಓ.ಸಿ ಕಡ್ಡಾಯದಿಂದ 2ಲಕ್ಷಕ್ಕೂ ಹೆಚ್ಚು ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಸಿಗದೆ ತೊಂದರೆ ಅನುಭವಿಸುವಂತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಶೂನ್ಯ ವೇಳೆಯಲ್ಲಿ ಸರ್ಕಾರದ ಗಮನ ಸೆಳೆದಿದ್ದಾರೆ.



