ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ
Advertisement

ಉಡುಪಿ: ಕಂಬಳ ಕೂಟದ ಅತ್ಯಂತ ಜನಪ್ರಿಯ, ಕೊಳಚೂರು ಕೊಂಡೊಟ್ಟು`ಚೆನ್ನ’ ಇನ್ನಿಲ್ಲ

ಕಂಬಳ ಕೂಟದ ಅತ್ಯಂತ ಜನಪ್ರಿಯ, ಅತಿ ಹೆಚ್ಚು ಪ್ರಶಸ್ತಿ ವಿಜೇತ ಪಟ್ಟಿಯಲ್ಲಿ ಅಗ್ರಗಣ್ಯ ಎನ್ನಿಸಿಕೊಂಡಿದ್ದ ಕೊಳಚೂರು ಕೊಂಡೊಟ್ಟು ಸುಕುಮಾರ್ ಶೆಟ್ಟಿ ಅವರ ‘ಚೆನ್ನ’ ಎಂಬ ಹೆಸರಿನ ಕೋಣ ಅಸುನೀಗಿದೆ.

ಸುಮಾರು 25 ವರ್ಷ ಪ್ರಾಯದ ಚೆನ್ನ ಕಳೆದ ಮೂರು ವರ್ಷದಿಂದ ವಿಶ್ರಾಂತಿಯಲ್ಲಿದ್ದ. ಇದೀಗ ವಯೋಸಹಜ ಅನಾರೋಗ್ಯದಿಂದ ಸಾವಿನ ಕದ ತೆರೆದಿದ್ದಾನೆ. ಇಂದು ಸಂಜೆ ಚೆನ್ನನ ಅಂತ್ಯಸಂಸ್ಕಾರ ನಡೆದಿದೆ. ಸುಮಾರು 22 ವರ್ಷಗಳ ಹಿಂದೆ ಕಡಂದಲೆ ಕಾಳು ಪಾಣಾರ ಅವರ ಹಟ್ಟಿಯಲ್ಲಿದ್ದ ಆ ಕೋಣವನ್ನು ಬಾರ್ಕೂರು ಶಾಂತಾರಾಮ ಶೆಟ್ಟಿ ಅವರು ತಮ್ಮಲ್ಲಿಗೆ ಕರೆ ತಂದು ಮುದ್ದಿನಿಂದ ಸಾಕಿದ್ದರು. ಬಳಿಕ ಕಂಬಳಕ್ಕಾಗಿ ಚೆನ್ನನನ್ನು ಅಣಿಗೊಳಿಸಿದ್ದರು. ಮೂಡಬಿದಿರೆಯ ಕೋಟಿ-ಚೆನ್ನಯ ಕಂಬಳದ ಗದ್ದೆಗಿಳಿದ ಮೊದಲ ಮೂರು ವರ್ಷವೂ ನೇಗಿಲು ಜೂನಿಯರ್ ವಿಭಾಗದಲ್ಲಿ ಬಾರ್ಕೂರು ಶಾಂತಾರಾಮ ಶೆಟ್ಟರಿಗೆ ಚೆನ್ನ ಮೆಡಲ್ ಬಾಚಿಕೊಟ್ಟಿತು.

ನಂತರ ಸೀನಿಯರ್ ಆಗಿ ಕೊಳಚೂರು ಕೊಂಡೊಟ್ಟು ಸುಕುಮಾರ ಶೆಟ್ಟರ ಹಟ್ಟಿಗೆ ತೆರಳಿತು. ತುಸು ತುಂಟ ಪೋಕುರಿಯ ಕೋಣನಾದ್ದರಿಂದ ಕಂಬಳ ಓಟ ಆರಂಭವಾಗುವ ಸಮಯದಲ್ಲಿಯೂ ಪೋಕರಿ ಮಾಡುತ್ತಿತ್ತು. ಇದೇ ಕಾರಣಕ್ಕೆ ಸೀನಿಯರ್ ವಿಭಾಗದಲ್ಲಿ ಒಂದು ವರ್ಷ ನೇಗಿಲು ವಿಭಾಗದಲ್ಲಿ ಚೆನ್ನನನ್ನು ಓಡಿಸಲಾಯಿತು. ಬಳಿಕ ಬಂಟ್ವಾಳದ ಮಹಾಕಾಳಿಬೆಟ್ಟು ಸೀತಾರಾಮ್ ಶೆಟ್ಟಿ ಅವರು ಚೆನ್ನನಿಗೆ ತನ್ನ ಕೋಣವನ್ನು ಜತೆ ಮಾಡಿದ್ದರು. ಆಗಲೇ ಅಲ್ಲಿಪಾದೆ ವಿನ್ಸೆಂಟ್ ಅವರು ಚೆನ್ನನಿಗೆ ಪ್ರೀತಿಯಿಂದ ಆರೈಕೆ ಮಾಡಿ ಕಂಬಳದ ಪಾಠ ಹೇಳಿಕೊಟ್ಟರು. ಅದೇ ವರ್ಷದ ನೇಗಿಲು ಹಿರಿಯ ವಿಭಾಗದಲ್ಲಿ ಚೆನ್ನ ಚಾಂಪಿಯನ್ ಆಗಿ ಹೊರಮ್ಮಿದ್ದನು.

Leave a Reply

Your email address will not be published. Required fields are marked *

ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ

ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ

ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ

ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

error: Content is protected !!