ಬಂಟ್ವಾಳ ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಕಂದಾಯ ಇಲಾಖೆ ವತಿಯಿಂದ ಬಿಸಿರೋಡಿನಲ್ಲಿ 79 ನೇ ಸ್ವಾತಂತ್ರ‍್ಯೋತ್ಸವ ಆಚರಣೆ ನಡೆದಿದೆ.

ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ಅವರು ಧ್ವಜಾರೋಹಣ ಮಾಡಿದ್ದಾರೆ. ಪೋಲೀಸ್ ಹಾಗೂ ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಇನ್ನು ಈ ಸಂದರ್ಭದಲ್ಲಿ ಶಾಸಕ ರಾಜೇಶ್ ನಾಯ್ಕ್, ಪುರಸಭಾ ಅಧ್ಯಕ್ಷ ವಾಸು ಪೂಜಾರಿ, ಬೂಡ ಅಧ್ಯಕ್ಷ ಬೇಬಿಕುಂದರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.



