ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಪಂಪವೆಲ್ ರೋಹನ್ ಸ್ಕ್ವೇರ್‌ನಲ್ಲಿ ಸ್ವಾತಂತ್ರ‍್ಯ ದಿನಾಚರಣೆ; 8 ಗಂಟೆಗೆ ರಾಷ್ಟ್ರಧ್ವಜಾರೋಹಣದೊಂದಿಗೆ ಪ್ರಾರಂಭವಾದ ಕಾರ್ಯಕ್ರಮ

ಭಾರತದ 79ನೇ ಸ್ವಾತಂತ್ರ‍್ಯ ದಿನವನ್ನು ರೋಹನ್ ಕಾರ್ಪೋರೇಶನ್ ಸಂಸ್ಥೆ ಪಂಪ್ ವೆಲ್‌ನ ರೋಹನ್ ಸ್ಕ್ವೇರ್ ಆವರಣದಲ್ಲಿ ಭವ್ಯವಾಗಿ ಆಚರಿಸಿತು.

ಕಾರ್ಯಕ್ರಮವು ಬೆಳಿಗ್ಗೆ 8 ಗಂಟೆಗೆ ರಾಷ್ಟ್ರಧ್ವಜಾರೋಹಣದೊಂದಿಗೆ ಪ್ರಾರಂಭವಾಗಿ, ಸಂಸ್ಥೆಯ ಸಿಬ್ಬಂದಿಗಳು, ಕಾರ್ಮಿಕರು ಹಾಗೂ ಸ್ಥಳೀಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ನಿವೃತ್ತ ಸೇನಾ ಅಧಿಕಾರಿ ಸುಬೇದಾರ್ ಅಪ್ಪು ಶೆಟ್ಟಿಯವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದ್ರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ರೋಹನ್ ಕಾರ್ಪೊರೇಷನ್ ಸಂಸ್ಥೆಯ ಸ್ಥಾಪಕರಾದ ರೋಹನ್ ಮೊಂತೆರೋರವರು, ಸ್ವಾತಂತ್ರ‍್ಯವು ಕೇವಲ ಒಂದು ದಿನದ ಆಚರಣೆಯಲ್ಲ; ಪ್ರತಿದಿನವೂ ಅದನ್ನು ಕಾಪಾಡುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಯುವ ಪೀಳಿಗೆ ದೇಶಾಭಿವೃದ್ಧಿಯಲ್ಲಿ ತೊಡಗಿಕೊಳ್ಳುವುದು ಅತ್ಯವಶ್ಯಕ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ನಿವೃತ್ತ ಸೇನಾ ಅಧಿಕಾರಿ ಸುಬೇದಾರ್ ಅಪ್ಪು ಶೆಟ್ಟಿ ಅವರು ರಾಷ್ಟ್ರಸೇವೆಗೆ ಸಲ್ಲಿಸಿದ ಮಹತ್ತರ ಕೊಡುಗೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿನ ಅವರು ದೇಶ ಸೇವೆ ನನ್ನ ಜೀವನದ ಅತ್ಯಂತ ಹೆಮ್ಮೆಯ ಕ್ಷಣ. ಈ ಗೌರವ ನನ್ನ ನಿವೃತ್ತ ಜೀವನದಲ್ಲೂ ದೇಶಸೇವೆಯ ನೆನಪುಗಳನ್ನು ಮತ್ತಷ್ಟು ಸ್ಮರಣೀಯವಾಗಿಸುತ್ತದೆ. ಓದು, ಉದ್ಯೋಗ, ಹಣ ಇವು ಜೀವನದ ಒಂದು ಭಾಗ ಮಾತ್ರ. ಇಂದಿನ ಯುವ ಪೀಳಿಗೆ ದೇಶಕ್ಕಾಗಿ ಸೇವೆ ಸಲ್ಲಿಸುವ ಧ್ಯೇಯವನ್ನೂ ಹೃದಯದಲ್ಲಿ ಇಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ನಿರ್ದೇಶಕ ಡಿಯಾನ್ ಮೊಂತೆರೋ ಮತ್ತು ಜನರಲ್ ಮ್ಯಾನೇಜರ್ ಸುಮನಾ ಭಾಗವಹಿಸಿದ್ರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!