ಭಾರತದ 79ನೇ ಸ್ವಾತಂತ್ರ‍್ಯ ದಿನವನ್ನು ರೋಹನ್ ಕಾರ್ಪೋರೇಶನ್ ಸಂಸ್ಥೆ ಪಂಪ್ ವೆಲ್‌ನ ರೋಹನ್ ಸ್ಕ್ವೇರ್ ಆವರಣದಲ್ಲಿ ಭವ್ಯವಾಗಿ ಆಚರಿಸಿತು.
ಕಾರ್ಯಕ್ರಮವು ಬೆಳಿಗ್ಗೆ 8 ಗಂಟೆಗೆ ರಾಷ್ಟ್ರಧ್ವಜಾರೋಹಣದೊಂದಿಗೆ ಪ್ರಾರಂಭವಾಗಿ, ಸಂಸ್ಥೆಯ ಸಿಬ್ಬಂದಿಗಳು, ಕಾರ್ಮಿಕರು ಹಾಗೂ ಸ್ಥಳೀಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ನಿವೃತ್ತ ಸೇನಾ ಅಧಿಕಾರಿ ಸುಬೇದಾರ್ ಅಪ್ಪು ಶೆಟ್ಟಿಯವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದ್ರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ರೋಹನ್ ಕಾರ್ಪೊರೇಷನ್ ಸಂಸ್ಥೆಯ ಸ್ಥಾಪಕರಾದ ರೋಹನ್ ಮೊಂತೆರೋರವರು, ಸ್ವಾತಂತ್ರ‍್ಯವು ಕೇವಲ ಒಂದು ದಿನದ ಆಚರಣೆಯಲ್ಲ; ಪ್ರತಿದಿನವೂ ಅದನ್ನು ಕಾಪಾಡುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಯುವ ಪೀಳಿಗೆ ದೇಶಾಭಿವೃದ್ಧಿಯಲ್ಲಿ ತೊಡಗಿಕೊಳ್ಳುವುದು ಅತ್ಯವಶ್ಯಕ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ನಿವೃತ್ತ ಸೇನಾ ಅಧಿಕಾರಿ ಸುಬೇದಾರ್ ಅಪ್ಪು ಶೆಟ್ಟಿ ಅವರು ರಾಷ್ಟ್ರಸೇವೆಗೆ ಸಲ್ಲಿಸಿದ ಮಹತ್ತರ ಕೊಡುಗೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿನ ಅವರು ದೇಶ ಸೇವೆ ನನ್ನ ಜೀವನದ ಅತ್ಯಂತ ಹೆಮ್ಮೆಯ ಕ್ಷಣ. ಈ ಗೌರವ ನನ್ನ ನಿವೃತ್ತ ಜೀವನದಲ್ಲೂ ದೇಶಸೇವೆಯ ನೆನಪುಗಳನ್ನು ಮತ್ತಷ್ಟು ಸ್ಮರಣೀಯವಾಗಿಸುತ್ತದೆ. ಓದು, ಉದ್ಯೋಗ, ಹಣ ಇವು ಜೀವನದ ಒಂದು ಭಾಗ ಮಾತ್ರ. ಇಂದಿನ ಯುವ ಪೀಳಿಗೆ ದೇಶಕ್ಕಾಗಿ ಸೇವೆ ಸಲ್ಲಿಸುವ ಧ್ಯೇಯವನ್ನೂ ಹೃದಯದಲ್ಲಿ ಇಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ನಿರ್ದೇಶಕ ಡಿಯಾನ್ ಮೊಂತೆರೋ ಮತ್ತು ಜನರಲ್ ಮ್ಯಾನೇಜರ್ ಸುಮನಾ ಭಾಗವಹಿಸಿದ್ರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…