ಸಾರ್ವಜನಿಕರ ಹಿತದೃಷ್ಟಿಯಿಂದ ಉಡುಪಿ ನಗರ, ಗ್ರಾಮೀಣ ಪ್ರದೇಶ ಹಾಗೂ ಗಡಿ ಭಾಗಗಳಲ್ಲಿ ಸಿಸಿಟಿವಿ ಅವಳಡಿಕೆಗೆ ಮುಂದಾಗಿರುವ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಉಡುಪಿ ಚೆಂಬರ್ ಆಫ್ ಕಾಮರ್ಸ್ ಸಹಕಾರದೊಂದಿಗೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಅಳವಡಿಸಲು ಉದ್ದೇಶಿಸಲಾಗಿರುವ ಶ್ಯೇನ ದೃಷ್ಟಿ ಕೇಂದ್ರಕ್ಕೆ ಉಡುಪಿ ಸರ್ವೀಸ್ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿ ಮಾತನಾಡಿದ ಸಚಿವರು, ಸಿಸಿಟಿವಿ ಅಳವಡಿಕೆಯಿಂದ ಜಿಲ್ಲೆಯಲ್ಲಿ ಅಹಿತಕರ ಘಟನೆಗಳನ್ನು ತಡೆಗಟ್ಟಬಹುದು ಎಂದ್ರು.

ಇನ್ನು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.



